LATEST NEWS
ಹಿಜಬ್ ವಿವಾದ – ಹೈಕೋರ್ಟ್ ಆದೇಶ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ

ಉಡುಪಿ ಮೇ 31: ಹಿಜಬ್ ಕುರಿತಂತೆ ಹೈಕೋರ್ಟ್ ಆದೇಶ ನೀಡಿದ ಬಳಿಕವೂ ಅದನ್ನು ಉಲ್ಲಂಘಿಸುವವರ ವಿರುದ್ದ ಕಠಿಣಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಹಿಜಬ್ ಕುರಿತಂತೆ ಹೈಕೋರ್ಟ್ ಆದೇಶ ಸ್ಪಷ್ಟವಾಗಿದ್ದು, ತರಗತಿಯ ಒಳಗೆ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಹೇಳಿದೆ. ಈ ನೆಲದಲ್ಲಿ ಬದುಕುವಂಥ ಕಾನೂನಿಗೆ ಗೌರವ ಕೊಡುವಂತ ಎಲ್ಲರೂ ಈ ಆದೇಶ ಪಾಲಿಸಬೇಕು. ಹೈಕೋರ್ಟ್ ಕಾನೂನು ಉಲ್ಲಂಘನೆ ಮಾಡುತ್ತೇವೆ ಅನ್ನೋದು ಸರಿಯಲ್ಲ ಅಂಥವರ ಮೇಲೆ ಕಠಿಣವಾದ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದೆ ಸಮಾಜದ್ರೋಹಿ ದೇಶದ್ರೋಹಿ ಚಟುವಟಿಕೆಗೆ ಕಾರಣವಾಗುತ್ತೆ ಎಂದರು.

ಕುಂದಾಪುರ ಲವ್ ಜಿಹಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆಯಾಗಿದ್ದು, ಪ್ರೀತಿಯ ಹೆಸರಲ್ಲಿ ಮದುವೆಯಾಗುತ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡುತ್ತಾರೆ. ಕೈಗೊಂದು ಮಗುವನ್ನು ಕೊಟ್ಟು ಓಡಿ ಹೋಗುತ್ತಾರೆ. ನಂತರ ತಲಾಖ್ ಎಂದು ಹೇಳಿ ಇನ್ನೊಬ್ಬರನ್ನು ಮದುವೆಯಾಗುತ್ತಾರೆ. ದೇಶದ ಅನೇಕ ಭಾಗಗಳಲ್ಲಿ ನಮ್ಮ ಹೆಣ್ಣುಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ. ಲವ್ ಜಿಹಾದ್ ಒಂದು ಪಿಡುಗು ತಕ್ಷಣ ಕೊನೆಯಾಗಬೇಕು. ಲವ್ ಜಿಹಾದಿಗೆ ಹೆಣ್ಣುಮಕ್ಕಳು ಬಲಿಯಾದರೆ ತಂದೆ-ತಾಯಿಯ ದುಃಖ ಕೇಳುವವರ್ಯಾರು? ,ಲವ್ ಜಿಹಾದ್ ತಡೆಗೆ ಬಲವಾದ ಕಾನೂನು ಜಾರಿ ಮಾಡುವ ಅಗತ್ಯ ಇದೆ. ಹಿಂದಿನಿಂದಲೂ ಈ ಬಗ್ಗೆ ವಾದ ಮಾಡಿಕೊಂಡು ಬಂದಿದ್ದೇನೆ ಎಂದರು.