LATEST NEWS
ಉಡುಪಿ ಜಿಲ್ಲೆ ಕೊರೊನಾ ಸೊಂಕಿನಿಂದಾಗಿ ಯಾರು ಮೃತಪಟ್ಟಿಲ್ಲ -ಶೋಭಾ ಕರಂದ್ಲಾಜೆ

ಉಡುಪಿ ಅಗಸ್ಟ್ 10: ಉಡುಪಿ ಜಿಲ್ಲೆಯಲ್ಲಿ ಕೇವಲ ಕೊರೊನಾದಿಂದಾಗಿ ಯಾರು ಸಾವನಪ್ಪಿಲ್ಲ, ಜಿಲ್ಲೆಯಲ್ಲಿ ಮರಣ ಹೊಂದಿರುವವರು ಬೇರೆ ಬೇರೆ ಕಾಯಿಲೆಯಿಂದ ಬಳಲುತಿದ್ದರು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ತಿಂಗಳುಗಳ ಬಳಿಕ ಜಿಲ್ಲೆಗೆ ಆಗಮಿಸಿದ ಸಂಸದೆ ಶೋಭಾ ಕರಂದ್ಲಾಜೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲೆಯಲ್ಲಿ 60 ಜನರು ಕೊರೊನಾದಿಂದ ಮರಣ ಹೊಂದಿದ್ದಾರೆ, ಇದು ನಮಗೆಲ್ಲ ಬೇಸರ ತರುವ ವಿಷಯವಾಗಿದೆ ಎಂದರು. ಆದರೆ ಮೃತಪಟ್ಟವರೆಲ್ಲ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿದ್ದವರ ಸಾವಾಗಿದ್ದು, ಕೇವಲ ಕೊರೊನಾ ಕಾರಣದಿಂದ ಜಿಲ್ಲೆಯಲ್ಲಿ ಯಾರಿಗೂ ಸಾವು ಬಂದಿಲ್ಲ. ಸಾವಿಗೀಡಾದವರು ಕಿಡ್ನಿ, ಕ್ಯಾನ್ಸರ್ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ, ಎಲ್ಲರಿಗೂ ಉತ್ತಮ ರೀತಿಯ ಚಿಕಿತ್ಸೆ ನೀಡಲಾಗುತ್ತಿದ್ದು, ಕೊರೊಮಾ ರೋಗ ಲಕ್ಷಣ ಇರುವವರು ಆಸ್ಪತ್ರೆಗೆ ಬರಲು ಹಿಂಜರಿಯುತ್ತಿದ್ದಾರೆ, ಇದರಿಂದ ಸಾವು ಸಂಭವಿಸುವ ಸಾಧ್ಯತೆ ಇದ್ದು, ಕೊರೊನಾ ಲಕ್ಷಣಗಳು ಕಂಡು ಬಂದೆ ಕೂಡಲೇ ಕೊರೊನಾ ಪರೀಕ್ಷೆ ಮಾಡಿದ್ರೆ ಯಾವ ಸಮಸ್ಯೆ ಇಲ್ಲ ಎಂದು ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.