KARNATAKA
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೋಭಾ ಕರಂದ್ಲಾಜೆ” ಇಂತಹ ಸುದ್ದಿ ಹೇಗೆ ಬರುತ್ತೋ ನಂಗೆ ಗೊತ್ತಿಲ್ಲ”..!

ಮೈಸೂರು : ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ಸುದ್ದಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು ಕೂಡ ಚರ್ಚೆಗೆ ಬಂದಿದೆ ಎಂಬ ವದಂತಿ ಮಾದ್ಯಮ, ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದ್ದು ಈ ಕುರಿತು ಸ್ವತಃ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನ ಅರಮನೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ,”ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ” ಆ ಬಗ್ಗೆ ಯಾವುದೇ ಚರ್ಚೆ ಕೂಡ ನಡೆದಿಲ್ಲ. ನಾನು ಕೇಂದ್ರದಲ್ಲಿ ಕೃಷಿ ಸಚಿವೆಯಾಗಿಯೇ ತುಂಬಾ ಸಂತೋಷವಾಗಿದ್ದೇನೆ. ನನಗೆ ಒಳ್ಳೆಯ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.
ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ಮೋದಿ ಅವರು ಮತ್ತೆ ಪ್ರಧಾನಿ ಆಗಲೆಂದು ನಾನು ಬಯಸುತ್ತೇನೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರತಿವರ್ಷದಂತೆ, ನಾಡಹಬ್ಬ ದಸರೆಯ ಗಜಪಡೆಯ ಮಾವುತರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ ಶೋಭಾ ಕರಂದ್ಲಾಜೆ ಮಾವುತರಿಗೆ ಊಟ ಬಡಿಸಿ, ಗಜರಾಜನ ಆಶೀರ್ವಾದ ಪಡೆದರು.