FILM
ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತೆಲುಗು ಯುವ ನಟ ಸುಧೀರ್

ವೈಜಾಗ್ ಜನವರಿ 23:ತೆಲುಗು ಚಿತ್ರರಂಗದ ಯುವನಟನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಜಾಗ್ ನಲ್ಲಿ ನಡೆದಿದೆ. ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಷ್ಮಿತಾ ನಿರ್ಮಾಣದಲ್ಲಿ ಮೂಡಿ ಬಂದಿದ್ದ ‘ಶೂಟೌಟ್’ ವೆಬ್ ಸಿರೀಸ್ ನಲ್ಲಿ ನಟಿಸಿದ್ದ ಹಾಗೂ ‘ಸೆಕೆಂಡ್ ಹ್ಯಾಂಡ್’ ಸಿನಿಮಾದ ಮೂಲಕ ತೆಲುಗು ಚಿತ್ರೋದ್ಯಮದಲ್ಲಿ ಗುರುತಿಸಿಕೊಂಡಿದ್ದ ಸುಧೀರ್ ವರ್ಮಾ . ವೈಯಕ್ತಿಕ ಕಾರಣಗಳಿಂದಾಗಿ ಅವರು ಇಂದು ತಮ್ಮ ವೈಜಾಗ್ ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೆಕೆಂಡ್ ಹ್ಯಾಂಡ್, ಕುಂದನಪು ಬೊಮ್ಮ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದ ಸುಧೀರ್, ಎರಡೂ ಚಿತ್ರಗಳ ಮೂಲಕ ಒಳ್ಳೆಯ ಹೆಸರನ್ನು ಸಂಪಾದಿಸಿದ್ದರು. ಆದರೆ, ಹೇಳಿಕೊಳ್ಳುವಂತಹ ಅವಕಾಶ ಅವರಿಗೆ ಸಿಗಲಿಲ್ಲ. ಹಾಗಾಗಿ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಜ್ಯೂನಿಯರ್ ಆರ್ಟಿಸ್ಟ್ ಆಗಿ ಸಿನಿಮಾ ರಂಗಕ್ಕೆ ಬಂದವರು, ನಂತರ ಕಷ್ಟಪಟ್ಟು ನಾಯಕನ ಸ್ಥಾನ ಏರಿದ್ದರು.
