Connect with us

LATEST NEWS

ಶಾರ್ಟ್ ಸರ್ಕ್ಯೂಟ್ ಬೆಂಕಿಗಾಹುತಿಯಾದ ಮೆಡಿಕಲ್ ಶಾಪ್

ಶಾರ್ಟ್ ಸರ್ಕ್ಯೂಟ್ ಬೆಂಕಿಗಾಹುತಿಯಾದ ಮೆಡಿಕಲ್ ಶಾಪ್

ಮಂಗಳೂರು ಅಕ್ಟೋಬರ್ 24: ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಹಂಪನಕಟ್ಟೆಯಲ್ಲಿರುವ ಸೆಂಟ್ರಲ್ ಮಾರುಕಟ್ಟೆ ರಸ್ತೆಯಲ್ಲಿರುವ ಮೆಡಿಕಲ್ ಶಾಪ್​ ಇದಾಗಿದ್ದು, ರಾತ್ರಿ 11 ಗಂಟೆಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಶಾಪ್​ಗೆ ಬೆಂಕಿ ಬಿದ್ದಿದೆ. ಇದರಿಂದ ಮೆಡಿಕಲ್ ಶಾಪಿನ ಎಲ್ಲಾ ಔಷಧಗಳು ಬೆಂಕಿಗಾಹುತಿಯಾಗಿವೆ .

ಜೊತೆಗೆ ಪೀಠೋಪಕರಣ ಸೇರಿದಂತೆ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿವೆ. ರಾತ್ರಿಯಾದ್ದರಿಂದ ಮೆಡಿಕಲ್ ಶಾಪ್​ನಲ್ಲಿ ಯಾರೂ ಇರಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ, ಪಕ್ಕದ ಅಂಗಡಿಗಳಿಗೆ ವ್ಯಾಪಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *