LATEST NEWS
ಟಯರ್ ಅಂಗಡಿಯಲ್ಲಿ ಬೆಂಕಿ ಅವಘಢ ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಟಯರ್ ಅಂಗಡಿಯಲ್ಲಿ ಬೆಂಕಿ ಅವಘಢ ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ
ಮಂಗಳೂರು ಅಕ್ಟೋಬರ್ 17: ಮಂಗಳೂರು ನಗರದ ಬಂದರ್ ನಲ್ಲಿರುವ ನವಜೀವನ ಟ್ರೇಡರ್ಸ್ ಟಯರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಮಂಗಳೂರು ಬಂದರ್ ನಲ್ಲಿರುವ ಹಿದಾಯತ್ ಸೆಂಟರ್ ನ ಸಮೀಪದ ಕೆ.ಸಿ ಸುರೇಶ್ ಮಾಲಿಕತ್ವದ ನವಜೀವನ್ ಟ್ರೇಡರ್ಸ್ ಟಯರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮೆಸ್ಕಾಂ ಗೆ ಕರೆ ಮಾಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಅಗ್ನಿ ಶಾಮಕದಳಕ್ಕೆ ಮಾಹಿತಿ ತಿಳಿಸಿದ್ದಾರೆ. ನಂತರ ಕೂಡಲೇ ಅಂಗಡಿ ತೆರೆದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 12 ಪ್ಲ್ಯಾಟ್ ಇದ್ದ ಕಾಂಪ್ಲೆಕ್ಸ್ ಇದಾಗಿದ್ದು, ಸ್ಥಳೀಯರ ಸಮಯಪ್ರಜ್ಞೆ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದ್ದು, ಸುಮಾರು 6 ಲಕ್ಷ ರೂ. ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.