KARNATAKA
ಬೀಳ್ಕೊಡುಗೆ ಬೆನ್ನಲ್ಲೇ ಹೃದಯಾಘಾತಕ್ಕೆ ಪೊಲೀಸ್ ಅಧಿಕಾರಿ ಬಲಿ..!
ಯಾದಗಿರಿ: ಬೀಳ್ಕೊಡುಗೆ ಸಮಾರಂಭದ ನಡೆದ ಕೆಲವೇ ಸಮಯದಲ್ಲಿ ಪೊಲೀಸ್ ಉಪ ನಿರೀಕ್ಷಕರೊಬ್ಬರು ಹೃದಯಾಘಾತ ( heart attack) ದಿಂದ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ನಗರ ಠಾಣೆಯಲ್ಲಿ PSI ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಸಾವನ್ನಪ್ಪಿದ ಅಧಿಕಾರಿಯಾಗಿದ್ದಾರೆ. ಪರಶುರಾಮ್ ಇತ್ತೀಚೆಗೆ ಸೈಬರ್ ಕ್ರೈಮ್ ಪಿಎಸ್ಐ ಆಗಿ ಇಲ್ಲಿಗೆ ವರ್ಗಾವಣೆಗೊಂಡಿದ್ದರು. ನಿನ್ನೆ ಮತ್ತೆ ವರ್ಗಾವಣೆಗೊಂಡು ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ಶುಕ್ರವಾರ ಪೊಲೀಸ್ ಕ್ವಾರ್ಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಈ ಸಾವು ಅನುಮಾನ ಮೂಡಿಸಿದ್ದು, ಕುಟುಂಬಸ್ಥರನ್ನು ಶಾಕ್‌ಗೆ ದೂಡಿದೆ. ಪರಶುರಾಮ್ ಅವರ ಪತ್ನಿ ಗರ್ಭಿಣಿಯಾಗಿದ್ದು ತವರಿಗೆ ತೆರಳಿದ್ದವರು ಮರಳಿದ್ದಾರೆ. ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಪರಶುರಾಮ್ ಅವರ ಪತ್ನಿ ಶ್ವೇತಾ ದೂರು ನೀಡಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಶ್ವೇತಾ ಆರೋಪಿಸಿದ್ದಾರೆ.
You must be logged in to post a comment Login