Connect with us

    LATEST NEWS

    ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಅಲ್ಲದೆ ಇನ್ನೇನು ಬಿಕಿನಿ ಧರಿಸಬೇಕಾ ? ಅಸಾದುದ್ದೀನ್ ಓವೈಸಿ ಪ್ರಶ್ನೆ

    ಹೈದರಾಬಾದ್, ಅಕ್ಟೋಬರ್ 15: ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿರುವ ಕಾರಣ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಹೋಗಿದೆ.

    ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದರೆ, ಮತ್ತೊಬ್ಬ ನ್ಯಾಯಮೂರ್ತಿಗಳಾದ ಹಿಮಾಂಶು ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ್ದಾರೆ. ಹೀಗಾಗಿ ಪ್ರಕರಣ ಈಗ ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗುತ್ತದೆ.

    ಇದರ ಮಧ್ಯೆ ಹೈದರಾಬಾದಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಶಿಕ್ಷಣ ಸಂಸ್ಥೆಗಳಲ್ಲಿ ಸಿಖ್ ರು ಪಗಡಿ, ಹಿಂದೂಗಳು ವಿಭೂತಿ ಧಾರಣೆ ಮಾಡುತ್ತಾರೆ. ಆದರೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಬಾರದು ಎಂದು ಹೇಳುತ್ತಾರೆ. ಹಾಗಾದರೆ ಅವರು ಹಿಜಾಬ್ ಅಲ್ಲದೆ ಬಿಕಿನಿ ಧರಿಸಿಕೊಂಡು ಬರಬೇಕೇ ಎಂದು ವ್ಯಂಗ್ಯವಾಡಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *