Connect with us

    KARNATAKA

    ಕೋಲಾರ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದು ವಿಕೃತಿ : ಇಬ್ಬರು ಬಂಧನ..!

    ಕೋಲಾರ:  ಕೋಲಾರದ ಮುಳಬಾಗಿಲಿನಲ್ಲಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಅಳವಡಿಸಿದ್ದ  ಶ್ರೀರಾಮನ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಿಂದ  ಕೊಯ್ದು ವಿಕೃತಿ ಮೆರೆದಿದ್ದಾರೆ.

    ಶ್ರೀರಾಮನ ಫ್ಲೆಕ್ಸ್ ಹರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು  ಈ ಸಂಬಂಧ ಮುಳಬಾಗಿಲು ಪೊಲೀಸರು ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಸದ್ಯ ಪೊಲೀಸರು ಬಂಧಿತ ವ್ಯಕ್ತಿಗಳ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply