LATEST NEWS
ಮಂಗಳೂರು – ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜಾ

ಮಂಗಳೂರು ಜನವರಿ 05: ಬಿಗ್ ಬಾಸ್ ಸ್ಪರ್ಧಿ ಕನ್ನಡದ ಖ್ಯಾತ ನಟಿ ಶುಭಾ ಪೂಂಜಾ ಯಾವುದೇ ಸದ್ದಿಲ್ಲದೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಮ್ಮ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಇಂದು ಉಡುಪಿ ಸಮೀಪದ ಮಜಲಬೆಟ್ಟುಬೀಡುವಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮದುವೆಯಾಗಿದ್ದಾರೆ.

ಕುಟುಂಬ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ ನಡೆದಿದ್ದು, ಮದುವೆಯ ವಿಚಾರವನ್ನು ಇನ್‌ಸ್ಟಾಗ್ರಾಂನಲ್ಲಿ ಶುಭಾ ಅವರು ಹಂಚಿಕೊಂಡಿದ್ದಾರೆ. ‘ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ’ ಎಂದಿದ್ದಾರೆ.