FILM
ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ ಎಂದ ಕಿರುತೆರೆ ನಟಿ ಶ್ವೇತಾ ತಿವಾರಿ

ಮುಂಬೈ : ವೆಬ್ ಸಿರೀಸ್ ಒಂದರ ಕಾರ್ಯಕ್ರಮದಲ್ಲಿ ಕಿರುತೆರೆ ನಟಿ ಶ್ವೇತಾ ತಿವಾರಿ ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಠಿಸಿದ್ದಾರೆ. ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್ ಕಮಿಷನರ್‍ಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಶ್ವೇತಾ ತಿವಾರಿಯ ಹೇಳಿಕೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಪರ ವಿರೋಧ ಕಾಮೆಂಟ್ ಗಳು ಬರುತ್ತಿವೆ.

ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯಲ್ಲಿ ಶ್ವೇತಾ ತಿವಾರಿ ನಟಿಸಿದ್ದಾರೆ. ಈ ವೆಬ್ ಸೀರಿಸ್ ಪ್ರಮೋಷನ್ ಇತ್ತೀಚೆಗೆ ಭೋಪಾಲ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶ್ವೇತಾ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶ್ವೇತಾ, ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
अभिनेत्री श्वेता तिवारी का भोपाल में विवादित बयान, कहा मेरे ब्रा का साइज़ भगवान ले रहे हैं !!
हिन्दू संगठन ने दी माफी मांगने की चेतावनी !!@JournalistVipin #ShwetaTiwari #hinduism pic.twitter.com/zrsBA6gMg8
— Sanket Pathak (@imsanketpathak) January 27, 2022