DAKSHINA KANNADA
ಪಂಜುರ್ಲಿ ದೈವದ ರೀಲ್ಸ್ ಧರ್ಮಸ್ಥಳಕ್ಕೆ ಬಂದು ಕ್ಷಮೆ ಕೇಳಿದ ಶ್ವೇತಾ….!!

ಬೆಳ್ತಂಗಡಿ ನವೆಂಬರ್ 3: ಕಾಂತಾರ ಸಿನೆಮಾದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಧರ್ಮಸ್ಥಳಕ್ಕೆ ಆಗಮಿಸಿ ತನ್ನ ತಪ್ಪಿನ ಬಗ್ಗೆ ಕ್ಷಮೆ ಯಾಚಿಸಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ.
ಮೇಕಪ್ ಆರ್ಟಿಸ್ಟ್ ಆಗಿರುವ ಶ್ವೇತಾ ರೆಡ್ಡಿ ಎಂಬ ಯುವತಿ ಕಾಂತಾರ ಸಿನೆಮಾದಲ್ಲಿ ಬರುವ ಪಂಜುರ್ಲಿ ದೈವದ ರೀತಿ ಮೇಕಪ್ ಮಾಡಿಕೊಂಡು, ದೈವದ ರೀಲ್ ಮಾಡಿ, ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ಈ ಪೋಸ್ಟ್ ವೈರಲ್ ಆಗಿ ಯುವತಿಯ ವಿರುದ್ದ ಆಕ್ರೋಶ ಕೇಳಿ ಬಂದಿತ್ತು. ನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ದೈವಾರಾಧನೆ ಅಣಕ ಮಾಡಿರುವ ಯುವತಿ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದರು. ದೈವಾರಾಧನೆಯು ತುಳುನಾಡಿನ ಧಾರ್ಮಿಕ ನಂಬಿಕೆಯ ಭಾಗವಗಿದೆ. ಹೀಗಾಗಿ ತುಳುನಾಡಿನ ನಂಬಿಕೆಗೆ ಇದರಿಂದ ಧಕ್ಕೆಯಾಗಿದೆ, ರೀಲ್ಸ್‌ನ್ನು ತಕ್ಷಣ ಡಿಲೀಟ್ ಮಾಡಿ ಕ್ಷಮೆ ಕೇಳುವಂತೆ ಹಲವರು ಕಾಮೆಂಟ್ ಮಾಡಿದ್ದಾರೆ. ಆಕ್ರೋಶದ ಬಳಿಕ ಇನ್‌ಸ್ಟಾಗ್ರಾಮ್ ಖಾತೆಯಿಂದ ಯುವತಿ ರೀಲ್ಸ್ ಡಿಲೀಟ್ ಮಾಡಿದ್ದಾಳೆ.

ಇದರ ಬೆನ್ನಲ್ಲೇ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕ್ಷೇತ್ರಕ್ಕೆ ಬಂದ ಶ್ವೇತ. ಎಸ್.ರೆಡ್ಡಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ನಂತರ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾಡಿ ಕ್ಷಮೆ ಕೇಳಿದ್ದಾರೆ.