LATEST NEWS
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೋನಾ ಪಾಸಿಟಿವ್

ಬೆಂಗಳೂರು ಆಗಸ್ಟ್ 4: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋರೂನಾ ಸೂಂಕು ಧೃಡಪಟ್ಟಿದೆ.
ನಿನ್ನೆ ಬೆಳಿಗ್ಗೆಯಿಂದಲೇ ಸಿದ್ದರಾಮಯ್ಯ ಅವರಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿನ್ನೆ ಸಂಜೆ ಸಿದ್ದರಾಮಯ್ಯ ಅವರ ಗಂಟಲ ಪರೀಕ್ಷೆ ನಡೆಸಲಾಗಿದ್ದು. ಇಂದು ಅದರ ಫಲಿತಾಂಶ ಬಂದಿದೆ.

ಸಿದ್ದರಾಮಯ್ಯ ಅವರ ಪುತ್ರ ಯತಿಂದ್ರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಂದೆಗೆ ಕೋರೊನಾ ಇರುವುದನ್ನು ಸ್ಪಷ್ಟಪಡಿಸಿದ್ದಾರೆ.ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. Corona antigen test ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆ.
ಇನ್ನು ಈ ಕುರಿತಂತೆ ಸಿದ್ದರಾಮಯ್ಯ ಅವರು ಕೂಡ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು ನನಗೆ ಕೋರೂನಾ ಸೂಂಕು ದೃಢಪಟ್ಟಿದ್ದು, ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಹೋಂ ಕ್ವಾರಂಟೈನ್ ಆಗಬೇಕೆಂದು ತಿಳಿಸಿದ್ದಾರೆ.