Connect with us

LATEST NEWS

ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಫೆ ಕಾಫಿ ಡೇ ಓನರ್ ಸಿದ್ಧಾರ್ಥ್ ಮರಣೋತ್ತರ ಪರೀಕ್ಷೆ

ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಫೆ ಕಾಫಿ ಡೇ ಓನರ್ ಸಿದ್ಧಾರ್ಥ್ ಮರಣೋತ್ತರ ಪರೀಕ್ಷೆ

ಮಂಗಳೂರು ಜುಲೈ 31: ಕಫೆ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಯಿತು. ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಮೃತದೇಹದ ಮರಣೋತ್ತರ ಪರೀಕ್ಷೆಗೆ ಇಬ್ಬರು ವಿಧಿ ವಿಜ್ಞಾನ ತಜ್ಞರನ್ನು ನಿಯೋಜಿಸಲಾಗಿತ್ತು.

ನೇತ್ರಾವತಿ ನದಿ ಸೇತುವೆಯಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ಕಾಫಿ ಕಿಂಗ್ ಮಾಜಿ ಸಿಎಂ ಎಸ್ಎಂಕೆ ಅಳಿಯ ಸಿದ್ದಾರ್ಥ ಅವರ ಮೃತ ದೇಹ ಇಂದು ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೆ ನೇತ್ರಾವತಿ ನದಿ ತಟದಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ಆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಮಧ್ಯೆ ಹೊಯಿಗೆ ಬಜಾರ್ ಎಂಬ ಪ್ರದೇಶದ ನದಿಭಾಗದಲ್ಲಿ ಮೃತದೇಹ ಪತ್ತೆಯಾಗಿತ್ತು.

ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಾಫಿ ಕಿಂಗ್ ಸಿದ್ದಾರ್ಥ್ ಅವರ ಪಾರ್ಥಿವ ಶರೀರವನ್ನು ಚಿಕ್ಕಮಗಳೂರಿಗೆ ರವಾನೆ ಮಾಡಲಾಗುತ್ತಿದೆ. ಆಸ್ಪತ್ರೆ ಆವರಣದಲ್ಲಿ 15 ಸ್ವಲ್ಪ ಕಾಲ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ 11 ಗಂಟೆಗೆ ಸುಮಾರಿಗೆ ಮೃತದೇಹವನ್ನು ಮಂಗಳೂರಿನಿಂದ ಚಾರ್ಮಾಡಿ ಘಾಟಿ ಮಾರ್ಗವಾಗಿ ಮೂಡಿಗೆರೆಗೆ ಕೊಂಡೊಯ್ಯಲಾಗುತ್ತದೆ. ಬಳಿಕ ಸ್ವಗ್ರಾಮ‌ ಚೇತನಹಳ್ಳಿಗೆ ಕೊಂಡೊಯ್ಯಲಾಗುತ್ತದೆ

ಬೇಲೂರು ಚೇತನಹಳ್ಳಿಯ ಸಿದ್ಧಾರ್ಥ್ ಕಾಫಿ ಎಸ್ಟೇಟ್ ಹಾಗೂ ಎಬಿಸಿ ಕಾಫಿ ಕ್ಯೂರಿಂಗ್ ಆವರಣದಲ್ಲಿಯೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನೌಕರರು ಹಾಗೂ ಕುಟುಂಬಸ್ಥರ ಅಂತಿಮ ದರ್ಶನದ ಬಳಿಕ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರುವ ಸಾಧ್ಯತೆಗಳಿವೆ.

Facebook Comments

comments