Connect with us

FILM

ಉಡುಪಿ ಕಾಪು ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ..!

ಉಡುಪಿ : ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿಯವರು ಹುಟ್ಟೂರಾದ ಉಡುಪಿಯ ಇತಿಹಾಸ ಪ್ರಸಿದ್ಧ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿಯವರು ರಕ್ಷಿತ್ ಶೆಟ್ಟಿಯನ್ನು ಆದಾರದಿಂದ ಬರ ಮಾಡಿಕೊಂಡು ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಹರಸಿದರು. ನಂತರ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಣೆ ಮಾಡಿ ತನ್ನ ಬಾಲ್ಯದ ದಿನಗಳನ್ನು ಮೆಲುಕು ಹಾಕಿದರು.

 

ನಾನು ಬಾಲ್ಯದಲ್ಲಿ ಪ್ರತಿವರ್ಷ ತಂದೆಯೊಂದಿಗೆ ಕಾಪುವಿನಲ್ಲಿ ಬಾವನ ಮನೆಗೆ ಬರುವಾಗ ಮಾರಿಗುಡಿಗೆ ಬಂದು ಹೋಗುತ್ತಿದ್ದೆ, ಈಗ ಇದರ ಸಂಪೂರ್ಣ ಚಿತ್ರಣವೇ ಬದಲಾಗಿದೆ, ನನ್ನ ಬಾವ ವಾಸುದೇವ ಶೆಟ್ರ ಮುಂದಾಳತ್ವದಲ್ಲಿ ಈ ಕೆಲಸ ನಡೆಯುತ್ತಿದೆ, ಸುಮಾರು ವರ್ಷಗಳಿಂದ ಅವರು ಈ ದೇವಸ್ಥಾನವನ್ನು ಹೇಗೆ ಅಭಿವೃದ್ಧಿಪಡಿಸುವುದು ಎಂಬ ಚಿಂತನೆಯಲ್ಲಿದ್ದರು, ಪುರಾತನ ಕಾಲದಲ್ಲಿ ಈ ರೀತಿಯಾಗಿ ಕಲ್ಲಿನ ದೇವಸ್ಥಾನಗಳನ್ನು ಕಟ್ಟುತ್ತಿದ್ದರು. ಈಗಿನ ಕಾಲದಲ್ಲಿ ಅನೇಕ ಕಡೆ ಕಾಂಕ್ರೀಟ್​ನಲ್ಲೆ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ, ದೇವಸ್ಥಾನ ಇದ್ದರೆ ಹೀಗಿರಬೇಕು, ಇಳಕಲ್​ ಕೆಂಪು ಶಿಲೆಯಲ್ಲಿ ಗರ್ಭಗುಡಿ ಬಹಳಷ್ಟು ಅದ್ಭುತವಾಗಿ ಮೂಡಿಬಂದಿದೆ ಎಂದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸಂದರ್ ಶೆಟ್ಟಿ ಮತ್ತಿರರು ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *