Connect with us

LATEST NEWS

ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ ರೂಪೇಶ್

ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ ರೂಪೇಶ್

ಮಂಗಳೂರು ಸೆಪ್ಟೆಂಬರ್ 7: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು.ಬಿ ರೂಪೇಶ್ ಅವರನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ನೇಮಕ ಮಾಡಿ ಆದೇಶ ಮಾಡಿದೆ. ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಮಹಿಳಾ ಡಿ.ಸಿ ಆಗಮಿಸಿದ್ದು, ಮೊದಲ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಸಿಂಧು ರೂಪೇಶ್ ಪಾತ್ರರಾಗಿದ್ದಾರೆ.

2011ರ ಬ್ಯಾಚ್ ನ ಐ.ಎ.ಎಸ್ ಅಧಿಕಾರಿಯಾಗಿರುವ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಿ.ಇ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ತಾತ್ಕಾಲಿಕವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಉಪವಿಭಾಗದ ಆಯುಕ್ತೆ ಪ್ರೀತಿ ಗೆಲೋಟ್ ಅವರನ್ನು ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಮೈಸೂರಿನ ಎನ್.ಐ.ಇ ಯಿಂದ ಬಿ.ಇ ಪದವೀಧರೆ ಸಿಂಧು ಬಿ.ರೂಪೇಶ್ 2011ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು.