Connect with us

    KARNATAKA

    ಸಿಂಧೂರಿ ಎಷ್ಟು ಮನೆ ಕೆಡಿಸಿದ್ದಾಳೆ….ರೋಹಿಣಿ ಸಿಂಧೂರಿ ದೆಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ಲ – ರೂಪಾ ಐಪಿಎಸ್

    ಬೆಂಗಳೂರು ಫೆಬ್ರವರಿ 22:ಐಎಎಸ್ ಅಧಿಕಾರಿ ರೂಹಿಣಿ ಸಿಂದೂರಿ ಹಾಗೂ ರೂಪಾ ಐಪಿಎಸ್ ನಡುವೆ ನಡೆಯುತ್ತಿರುವ ಜಡೆಜಗಳಕ್ಕೆ ಇದೀಗ ಆಡಿಯೋ ಒಂದು ಎಂಟ್ರಿ ಕೊಟ್ಟಿದ್ದು. ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.


    ಆ ಆಡಿಯೋದಲ್ಲಿ ರೂಪಾ ಮಾತನಾಡಿ ಗಂಗರಾಜುಗೆ ರೋಹಿಣಿ ವಿರುದ್ಧ ದೂರು ನೀಡುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಆಡಿಯೋ ಹೀಗಿದೆ.. ರೋಹಿಣಿ ಫ್ಯಾಮಿಲಿದು ಲ್ಯಾಂಡ್ ಬ್ಯುಸಿನೆಸ್, ರಿಯಲ್ ಎಸ್ಟೇಟ್ ಬ್ಯುಸಿನೆಸ್. ಕಬಿನಿ ಹತ್ತಿರ ಒಂದು ಲ್ಯಾಂಡ್ ಇದೆ ಅಂತಾ ಪಹಣ್ ಕೊಟ್ಟಿ ನನ್ನ ಗಂಡ ಲ್ಯಾಂಡ್ ರೆಕಾರ್ಡ್ಸ್ ನಲ್ಲಿ ಇರೋದ್ರಿಂದ ಹೆಲ್ಪ್ ತಗೋಂಡಿದ್ದಾಳೆ. ಯಾರೋ ಬುಜ್ಜಮ್ಮ ಅನ್ನೋರ ಲ್ಯಾಂಡ್ ಎಷ್ಟೋ ಜನರ ಹೆಸರಲ್ಲಿದೆ ತಗೋಬಹುದಾ ಅಂತಾ ಒಪಿನಿಯನ್ ಕೇಳಿದ್ದಾಳೆ.

    ‘ನಮ್ಮವರನ್ನು ಬಳಸಿಕೊಂಡು ಲ್ಯಾಂಡ್ ಡೀಲ್ ಮಾಡಿದ್ದಾರೆ’ ​​‘ಗಂಡನ ರಿಯಲ್ ಎಸ್ಟೇಟ್​ ಪ್ರಮೋಟ್ ಮಾಡಲು ಮಾಹಿತಿ ಸಂಗ್ರಹಿಸಿದ್ದಾರೆ’ ‘ನಮ್ಮವರಿಂದ ರೋಹಿಣಿ ಸಿಂಧೂರಿ ಮಾಹಿತಿ ಪಡೆಯುತ್ತಿದ್ದಾರೆ’. ಆಯಮ್ಮನ ದೆಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ. ನಾನು ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ. ನಾವು ನೋಡಿದ್ದೀವಲ್ಲ ಎಂದು ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಡಿ.ರೂಪಾ ಗಂಗರಾಜು ಜತೆ ಸಂಭಾಷಣೆ ವೇಳೆ ಆರೋಪ ಮಾಡಿದ್ದಾರೆ. ಸದ್ಯ ಈ ಆಡಿಯೋ ಈಗ ವೈರಲ್ ಆಗುತ್ತಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply