LATEST NEWS
ಅದ್ಭುತ ಹಾಡುಗಾರ ಬಿ. ಕೃಷ್ಣ ಕಾರಂತ್ ಇನ್ನಿಲ್ಲ
ಉಡುಪಿ ಡಿಸೆಂಬರ್ 13: ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್ ( RRC) ನ ನಿವೃತ್ತ ಉದ್ಯೋಗಿಯಾಗಿದ್ದ ಇವರು ಅದ್ಭುತ ಹಾಡುಗಾರರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಇವರ ಹಾಡಿನ ಕ್ಯಾಸೆಟ್ ಗಳು ಬಹಳ ಜನಪ್ರಿಯವಾಗಿದ್ದವು. ರಂಗಭೂಮಿ ಉಡುಪಿಯ ಸದಸ್ಯರಾದ ಇವರು ಸಂಸ್ಥೆಯ ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೆ, ಹಿನ್ನೆಲೆ ಹಾಡುಗಾರರಾಗಿ ಬಹಳಷ್ಟು ನಾಟಕಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸಾಂಸ್ಕೃತಿಕ ರಂಗಕ್ಕೆ ನೀಡಿರುವ ಕೊಡುಗೆಗಾಗಿ ಇವರನ್ನು ಇತ್ತೀಚಿಗೆ ರಂಗಭೂಮಿ ಉಡುಪಿ ಸಂಸ್ಥೆಯು ಗೌರವಿಸಿ ಸನ್ಮಾನಿಸಿತ್ತು.
ಬಿ.ಕೃಷ್ಣ ಕಾರಂತರು ಪತ್ನಿ, ಇಬ್ಬರು ಪುತ್ರರು, ಸಂಬಂಧಿಕರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಈ ಸಾಧಕ ಕಲಾವಿದನಿಗೆ ರಂಗಭೂಮಿ ಉಡುಪಿ ಸಂತಾಪ ಸೂಚಿಸಿದೆ.