Connect with us

    FILM

    ಮೊದಲ ಮಗುವಿನ ನಿರೀಕ್ಷೆಯಲ್ಲಿ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್

    ಮುಂಬೈ ಮಾರ್ಚ್ 4: ಭಾರತದ ಖ್ಯಾತ ಹಿನ್ನಲೆ ಗಾಯಕಿ ಶ್ರೇಯಾ ಘೋಷಾಲ್ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.


    ಸಾಮಾಜಿಕ ಜಾಲತಾಣದಲ್ಲಿ ಬೆಬಿ ಬಂಪ್ ಪೋಟೋ ಒಂದನ್ನು ಶೇರ್ ಮಾಡಿರುವ ಅವರು ನಾವು ಬೇಬಿ ಶ್ರೇಯಾದಿತ್ಯ ನಿರೀಕ್ಷೆಯಲ್ಲಿದ್ದೇವೆ. ಶಿಲಾದಿತ್ಯ ಮತ್ತು ನಾನು ಈ ಸುದ್ದಿಯನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ರೋಮಾಂಚನಗೊಂಡಿದ್ದೇವೆ.

    ನಮ್ಮ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ನಾವು ಸಿದ್ಧರಾಗಿರುವಾಗ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದಗಳು ಬೇಕು ಎಂದು ಬರೆದುಕೊಂಡು ಬೇಬಿ ಬಂಪ್ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

    2015ರ ಫೆಬ್ರವರಿ ತಿಂಗಳಲ್ಲಿ ಸಾಂಪ್ರದಾಯಿಕ ಬಂಗಾಳಿ ಶೈಲಿಯಲ್ಲಿ ಶ್ರೇಯಾ ಮತ್ತು ಶಿಲಾದಿತ್ಯ ವಿವಾಹ ಮಹೋತ್ಸವ ನಡೆಯಿತು. ಇವರಿಬ್ಬರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್.

    ಮದುವೆಗೂ ಮುನ್ನ ಹತ್ತು ವರ್ಷಗಳ ಕಾಲ ಶ್ರೇಯಾ ಮತ್ತು ಶಿಲಾದಿತ್ಯ ಪ್ರೀತಿಸಿದ್ದರು. ಇದೀಗ ಮದುವೆಯಾಗಿ 6 ವರ್ಷಗಳ ಬಳಿಕ ತಾಯಿ ಆಗುವ ಮೂಲಕ ಶ್ರೇಯಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply