Connect with us

    LATEST NEWS

    ಮಂಗಳೂರಿಗೆ ಆಗಮಿಸಿದ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ ಸಿನಿ ಶೆಟ್ಟಿ

    ಮಂಗಳೂರು ಜುಲೈ 18: ಈ ಬಾರಿಯ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಉಡುಪಿ ಮೂಲದ ಸಿನಿ ಶೆಟ್ಟಿ ಪ್ರಶಸ್ತಿ ಗೆದ್ದ ಬಳಿಕ ಸೋಮವಾರ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ್ದಾರೆ.

    ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಕುಟುಂಬಸ್ಥರು ಹಾಗೂ ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು.


    ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬದುಕಿಗೆ ತಿರುವು ಕೊಡುವಂತಹ ಉತ್ತಮ ಕತೆ ದೊರೆತರೆ ಸಿನಿಮಾಗಳಲ್ಲಿ ಕೂಡ ಅಭಿನಯಿಸುವೆ ಎಂದು ಹೇಳಿದರು. ಮಂಗಳೂರಿನಲ್ಲಿ ತನಗೆ ದೊರೆತ ಉತ್ತಮ ರೀತಿಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಎಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ತಿಳಿಸಿದರು. ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಕುಟುಂಬ ಸದಸ್ಯರ ಜೊತೆ ಕಟೀಲು ಕ್ಷೇತ್ರಕ್ಕೆ ತೆರಳಿ, ದೇವಿಯ ದರ್ಶನ ಪಡೆದರು.

    Share Information
    Advertisement
    Click to comment

    You must be logged in to post a comment Login

    Leave a Reply