LATEST NEWS
ಧರ್ಮಸ್ಥಳ ಪ್ರಕರಣದ ತನಿಖೆಗೆ ಮಂಗಳೂರಿಗೆ ಆಗಮಿಸಿದ ವಿಶೇಷ ತನಿಖಾ ತಂಡ

ಮಂಗಳೂರು ಜುಲೈ 25: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರ ರಚಿಸಿರುವ ಎಸ್ ಐಟಿ ತಂಡ ಇಂದು ಮಂಗಳೂರಿಗೆ ಆಗಮಿಸಿದೆ. ಇದರೊಂದಿಗೆ ಅಧಿಕೃತವಾಗಿ ಪ್ರಕರಣದ ತನಿಖೆ ಪ್ರಾರಂಭವಾಗಲಿದೆ.
ತನಿಖೆಯ ಭಾಗವಾಗಿರುವ ಡಿಐಜಿ ಎಂ.ಎನ್. ಅನುಚೇತ್ ಮಂಗಳೂರಿಗೆ ಆಗಮಿಸಿ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಪರಿಶೀಲಿಸಲು ಮತ್ತು ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು SIT ಶೀಘ್ರದಲ್ಲೇ ಧರ್ಮಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
