LATEST NEWS
ಸೀತಾರಾಮ ಸಿರಿಯಲ್ ನಲ್ಲಿ ಹೆಲ್ಮೆಟ್ ಇಲ್ಲದೆ ವಾಹನ ಸಂಚಾರ – ಪೊಲೀಸ್ ರಿಗೆ ಕಂಪ್ಲೆಟ್ ಕೊಟ್ಟ ಮಂಗಳೂರಿನ ವಿಕ್ಷಕ
ಮಂಗಳೂರು, ಮೇ 12: ದಾರವಾಹಿಯೊಂದರಲ್ಲಿ ನಟಿ ಹೆಲ್ಮೆಟ್ ಧರಿಸದೇ ಸ್ಕೂಟರ್ ಚಲಾಯಿಸಿದ್ದಕ್ಕೆ ಮಂಗಳೂರಿನ ವಿಕ್ಷಕರೊಬ್ಬರು ಸಂಚಾರಿ ಪೊಲೀಸರಿಗೆ ಕಂಪ್ಲೆಟ್ ಕೊಟ್ಟ ಘಟನೆ ನಡೆದಿದ್ದು, ಇದೀಗ ಹೆಲ್ಮೆಟ್ ಇಲ್ಲದೆ ಸಂಚರಿಸಿದ ನಟಿಯೊಬ್ಬರಿಗೆ ವೀಕ್ಷಕರ ದೂರನ್ನು ಅನುಸರಿಸಿ ಪೊಲೀಸರು ದಂಡ ವಿಧಿಸಿದ ಪ್ರಸಂಗ ನಡೆದಿದೆ
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಸೀತಾರಾಮ’ ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯಲ್ಲಿ ನಟಿ ಮತ್ತು ಇನ್ನೊಬ್ಬ ನಟಿ ಇಬ್ಬರು ದ್ವಿಚಕ್ರ ವಾಹನದಲ್ಲಿ ಸಂಚರಿಸುವ ದೃಶ್ಯವೊಂದಿತ್ತು. ಅದರಲ್ಲಿ ಸಹ ಸವಾರಳಾಗಿದ್ದ ಯುವತಿ ಹೆಲ್ಮೆಟ್ ಧರಿಸಿರಲಿಲ್ಲ. ಟಿವಿಯಲ್ಲಿ ಪ್ರಸಾರವಾದ ಧಾರಾವಾಹಿಯ ಈ ದೃಶ್ಯವನ್ನು ಮಂಗಳೂರಿನಲ್ಲಿ ವೀಕ್ಷಿಸಿದ ಜಯಪ್ರಕಾಶ್ ಎಕ್ಕೂರು ಎಂಬವರು ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಧಾರಾವಾಹಿಯಲ್ಲಿ ಸಂಚಾರ ನಿಯಮದ ಉಲ್ಲಂಘನೆಯಾಗಿದೆ. ನಟ-ನಟಿಯರು ಸಂಚಾರ ನಿಯಮ ಉಲ್ಲಂಘಿಸುವುದು ಪ್ರೇಕ್ಷಕರಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಹಾಗಾಗಿ ಸಂಬಂಧಪಟ್ಟ ನಟಿ, ಧಾರಾವಾಹಿಯ ನಿರ್ದೇಶಕ ಮತ್ತು ಪ್ರಸಾರ ಮಾಡಿದ ವಾಹಿನಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ದೂರಿನಲ್ಲಿ ಆಗ್ರಹಿಸಿದ್ದರು.
ಇದರ ವಿಚಾರಣೆ ಕೈಗೆತ್ತಿಕೊಂಡ ಕದ್ರಿ ಸಂಚಾರ ಪೂರ್ವ ಠಾಣೆಯ ಪೊಲೀಸ್ ಇನ್‌ಸ್ಟೆಕ್ಟರ್ ಅವರು ವಾಹಿನಿಯ ನಿರ್ದೇಶಕ ಮೋಹನ್ ಕುಮಾರ್ ಮತ್ತು ಮಹಿಳೆ ಸವಾರಿ ಮಾಡುತ್ತಿದ್ದ ದ್ವಿಚಕ್ರ ವಾಹನ ಮಾಲೀಕರು ಹಾಗೂ ಧಾರಾವಾಹಿ ನಿರ್ದೇಶಕ ಬಿ. ಮಧುಸೂದನ್ ಅವರಿಗೆ ನೋಟಿಸ್ ಜಾರಿಗೊಳಿಸಿ ಮಾಹಿತಿ ನೀಡುವಂತೆ ಸೂಚಿಸಿದ್ದರು. ನೋಟಿಸ್‌ಗೆ ಉತ್ತರಿಸಿದ ಅವರು ‘ಧಾರಾವಾಹಿಯ ದೃಶ್ಯವನ್ನು ಬೆಂಗಳೂರು ನಗರದ ನಂದಿನಿ ಲೇಔಟ್‌ನಲ್ಲಿ ಚಿತ್ರೀಕರಿಸಲಾಗಿದೆ’ ಎಂದು ತಿಳಿಸಿದ್ದರು. ಪ್ರಕರಣವನ್ನು ನಿಂದಿನಿ ಲೇಔಟ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಕದ್ರಿ ಠಾಣೆ ಪೊಲೀಸರು ಹಿಂಬರಹ ನೀಡಿದ್ದರು.
ಜಯಪ್ರಕಾಶ್ ಅವರು 27 ಫೆಬ್ರುವರಿ 2024ರಂದು ನಂದಿನಿ ಠಾಣೆಗೆ ಪತ್ರ ಬರೆದು ಕದ್ರಿ ಠಾಣೆಯಿಂದ ವರ್ಗಾವಣೆಗೊಂಡಿರುವ ದೂರಿನ ಬಗ್ಗೆ ಕೈಕೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಕೋರಿದ್ದರು. ಇದಕ್ಕೆ ಉತ್ತರಿಸಿದ ಇಲಾಖೆ ‘ಸೀತಾರಾಮ’ ಧಾರಾವಾಹಿಯ ಪ್ರೊಡಕ್ಷನ್ ಮ್ಯಾನೇಜರ್ ಅವರಿಗೆ ನೋಟಿಸ್ ಜಾರಿಗೊಳಿಸಿರುವುದಾಗಿ ತಿಳಿಸಿತ್ತು. ತಪ್ಪು ಒಪ್ಪಿಕೊಂಡಿರುವ ಧಾರಾವಾಹಿ ತಂಡವು, ಇನ್ನು ಮುಂದೆ ನಮ್ಮ ಧಾರಾವಾಹಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವುದಿಲ್ಲ. ನಿಯಮ ಪಾಲಿಸುತ್ತೇವೆ’ ಎಂದು ಮುಚ್ಚಳಿಕೆ ಬರೆದುಕೊಟ್ಟಿದೆ. ಪೊಲೀಸ್ ಇಲಾಖೆಯ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಮೇ 10ರಂದು ವಾಹನ ಮಾಲೀಕರಿಗೆ ₹500 ದಂಡ ವಿಧಿಸಿದೆ. ಜೊತೆಗೆ ಇದರ ಪ್ರತಿಯನ್ನು ಜಯಪ್ರಕಾಶ್ ಅವರಿಗೆ ಕಳುಹಿಸಿದೆ.