Connect with us

    BELTHANGADI

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಥೆಯಾಧಾರಿತ ಚಿತ್ರ ‘ಕಾನೂರಾಯಣ’ ಕ್ಕೆ ಚಾಲನೆ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಥೆಯಾಧಾರಿತ ಚಿತ್ರ ‘ಕಾನೂರಾಯಣ’ ಕ್ಕೆ ಚಾಲನೆ

    ಬೆಳ್ತಂಗಡಿ,ಅಕ್ಟೋಬರ್ 21: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಶೋಗಾಥೆ, ಸಮಸ್ಯೆಗಳು ಹಾಗೂ ಸವಾಲುಗಳನ್ನು ಪ್ರತಿಬಿಂಬಿಸುವ ‘ ಕಾನೂರಾಯಣ’ ಚಲನಚತ್ರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಈ ಚಲನ ಚಿತ್ರಕ್ಕೆ ಧರ್ಮಸ್ಥಳದಲ್ಲಿ ಚಾಲನೆ ನೀಡಿದರು. ಚಲನಚಿತ್ರವು ನಗರ ಪ್ರದೇಶದಲ್ಲಿರುವ ಜನರಿಗೂ ಗ್ರಾಮೀಣ ಪ್ರದೇಶದ ಸಮಸ್ಯೆ, ಸವಾಲುಗಳನ್ನು ಹಾಗೂ ಕೃಷಿಯ ಮಹತ್ವವನ್ನು ತಿಳಿಸಿ ಅವರೂ ಗ್ರಾಮೀಣ ಭಾಗಕ್ಕೆ ಬಂದು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಸಂದೇಶವನ್ನು ಈ ಚಲನಚಿತ್ರ ನೀಡಲಿ ಎಂದು ಅವರು ಇದೇ ಸಂದರ್ಭದಲ್ಲಿ ಆಶಿಸಿದರು. ಹಲವು ಸಿನಿಮಾ ನಿರ್ದೇಶಕರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದು, ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ ಈ ಚಿತ್ರ ನಿರ್ದೇಶನದ ನೇತೃತ್ವವನ್ನು ವಹಿಸಿದ್ದಾರೆ. ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ನಾಗಾಭರಣ ಈ ಚಿತ್ರ ಮುಂದಿನ 50 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲೆಯ ಬೆಳವಡಿ ಗ್ರಾಮದಲ್ಲಿ ಚಿತ್ರೀಕರಣವನ್ನು ಮಾಡಲಿದೆ ಎಂದು ಮಾಹಿತಿ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply