LATEST NEWS
ಈ ಬಾರಿ ದೇಶದಲ್ಲಿ ಸಾಮಾನ್ಯ ಮುಂಗಾರು ದಕ್ಷಿಣಭಾರತದಲ್ಲಿ ಹೆಚ್ಚು ಮಳೆ ಸಾಧ್ಯತೆ – ಸ್ಕೈಮೆಟ್ ವರದಿ
ನವದೆಹಲಿ ಎಪ್ರಿಲ್ 09: ದೇಶದಲ್ಲಿ ಬಿರು ಬಿಸಿನ ನಡುವೆ ಇದೀಗ ಮುಂದಿನ ಮುಂಗಾರು ಮಳೆ ಬಗ್ಗೆ ಸ್ಕೈಮೆಟ್ ವರದಿ ನೀಡಿದ್ದು, ದೇಶದಲ್ಲಿ ಸಾಮಾನ್ಯ ಮುಂಗಾರು ಮಳೆಯಾಗಲಿದೆ ಎಂದು ವರದಿ ಮಾಡಿದೆ.
ಈ ವರ್ಷ ಜೂನ್ ಮತ್ತು ಸೆಪ್ಟೆಂಬರ್ ನಡುವೆ ಭಾರತವು ‘ಸಾಮಾನ್ಯ’ ಮಾನ್ಸೂನ್ ಅನ್ನು ಅನುಭವಿಸುವ ನಿರೀಕ್ಷೆ ಇದೆ. ಮುಂಗಾರು ಮಳೆ ಶೇಕಡಾ 102ರಷ್ಟು ಆಗುವ ನಿರೀಕ್ಷೆಯಿದೆ. ಜೂನ್‌ನಿಂದ ಸೆಪ್ಟೆಂಬರ್ ವರೆಗೆ, ಮಧ್ಯ ಮತ್ತು ಪಶ್ಚಿಮ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದಿದೆ. ಈಶಾನ್ಯ ಭಾರತವು ಋತುವಿನ ಮೊದಲಾರ್ಧದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯನ್ನು ಅನುಭವಿಸಬಹುದು. ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಗೋವಾದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಮತ್ತು ಕೇಂದ್ರ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಸ್ಕೈಮೆಟ್ ತಿಳಿಸಿದೆ.