Connect with us

LATEST NEWS

ಅಪ್ಪ ಸೇದಿ ಬಿಸಾಕಿದ್ದ ಬೀಡಿ ತುಂಡನ್ನು ನುಂಗಿ 10 ತಿಂಗಳ ಮಗು ಸಾವು

ಮಂಗಳೂರು ಜೂನ್ 17: ಅಪ್ಪ ಸೇದಿ ಬಿಸಾಕಿದ ಬೀಡಿಯ ಸಣ್ಣ ತುಂಡನ್ನು 10 ತಿಂಗಳ ಪ್ರಾಯದ ಮಗುವೊಂದು ನುಂಗಿದ ಪರಿಣಾಮ ಸಾವನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ.


ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್‌ ಕುಮಾರ್‌ ಮೃತ ಮಗು. ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10.25ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.

ತನ್ನ ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ’ ಎಂದು ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *