LATEST NEWS
ಹೆಬ್ರಿ – ಮೂರೂವರೆ ವರ್ಷದ ಮಗುವಿನ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ
ಉಡುಪಿ, ಸೆಪ್ಟೆಂಬರ್ 14: ಮೂರೂವರೆ ವರ್ಷದ ಮಗುವಿನ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರುವರೆ ವರ್ಷದ ಮಗುವನ್ನು ಹುಷಾರಿಲ್ಲ ಎಂದು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಚಿಕಿತ್ಸೆ ನೀಡುವ ವೇಳೆ ವೈದ್ಯರು ಆತನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.
ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ವಿಚಾರವನ್ನು ವೈದ್ಯರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಬಳಿಕ, ಡಿಹೆಚ್ಒ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ನಂತರ, ಅಮಾವಾಸ್ಯೆಬೈಲು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ. ಇನ್ನು, ಮಗುವಿನ ಮೇಲಾದ ಗಾಯದ ಬಗ್ಗೆ ತಾಯಿ ಸ್ಪಷ್ಟ ಮಾಹಿತಿ ನೀಡದೆ ತಡವರಿಸಿದ್ದಾರೆ.
ಪ್ರಕರಣ ಸಂಬಂಧ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮಾತನಾಡಿ, ಮಗವಿನ ದೇಹದ ಮೇಲೆ ಗಾಯದ ಕಲೆ ಇದೆ. ಮೇಲ್ನೋಟಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವುದು ಗೊತ್ತಾಗುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ ಮಾಹಿತಿಯಂತೆ ಆಸ್ಪತ್ರೆಗೆ ಭೇಟಿ ನೀಡಿದ್ದೇವೆ. ಮಗುವಿನ ಆರೋಗ್ಯ ವಿಚಾರಿಸಿ ವರದಿ ಪಡೆದಿದ್ದೇವೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದೆ. ಮಗು ಚೇತರಿಸಿಕೊಂಡ ಬಳಿಕ ಹೇಳಿಕೆ ಪಡೆಯಲಿದ್ದೇವೆ ಎಂದು ಹೇಳಿದರು.
You must be logged in to post a comment Login