LATEST NEWS
ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರಕ್ಕೆ ಗುಂಡಿಗೆ ಬಿದ್ದ ಕಾರು…!!

ಮಂಗಳೂರು ಫೆಬ್ರವರಿ 26: ಮಂಗಳೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಕ್ಕೆ ಕಾರೊಂದು ಒಳಚರಂಡಿಗೆ ಬಿದ್ದ ಘಟನೆ ಕೋಡಿಯಾಲ್ ಗುತ್ತು ಬಳಿ ನಡೆದಿದೆ.
ಕೋಡಿಯಾಲ್ ಗುತ್ತು ಬಳಿ ರಸ್ತೆ ಬದಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು ಒಳಚರಂಡಿಗಾಗಿ ಗುಂಡಿ ಅಗೆಯಲಾಗಿತ್ತು. ಇಂದು ಬೆಳಿಗ್ಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಈ ಗುಂಡಿಗೆ ಬಿದ್ದಿದೆ. ಈ ವೇಳೆ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

Continue Reading