Connect with us

    FILM

    ಪಬ್​​ನಲ್ಲಿ ಬಿಗ್​ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ

    ಬೆಂಗಳೂರು, ಡಿಸೆಂಬರ್ 03 : ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

    ತಡರಾತ್ರಿ ಬೆಂಗಳೂರಿನ ಸದಾಶಿವನಗರದ ಪಬ್​ನಲ್ಲಿ ಪೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಕೀರ್ತಿ ಮೇಲೆ ವ್ಯಕ್ತಿಯೊಬ್ಬ ಬಿಯರ್​ ಬಾಟಲ್​ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಸದಾಶಿವನಗರ ಪಬ್​ ಗೆ ಕಿರಿಕ್ ಕೀರ್ತಿ ತಮ್ಮ ಸ್ನೇಹಿತರೊಂದಿಗೆ ಹೋಗಿದ್ದರು.

    ಈ ವೇಳೆ ಅಲ್ಲಿದ್ದ ಒಬ್ಬ ವ್ಯಕ್ತಿಯೊಬ್ಬ ಕಿರಿಕ್​ ಕೀರ್ತಿ ಅವರ ಫೋಟೋ ತೆಗೆದಿದ್ದಾರೆ. ನನ್ನ ಪರ್ಮಿಷನ್​ ಇಲ್ಲದೇ ಯಾಕೆ ಫೋಟೋ ತೆಗೆದುಕೊಂಡಿದ್ದೀರ ಎಂದು ಕಿರಿಕ್​ ಕೀರ್ತಿ ಕೇಳಿದ್ದಾರೆ. ಹೀಗಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಕುಪಿತಗೊಂಡ ಆ ವ್ಯಕ್ತಿ ಬಿಯರ್​ ಬಾಟಲ್​ ನಿಂದ ಕಿರಿಕ್​ ಕೀರ್ತಿ ತಲೆಗೆ ಹೊಡೆದಿದ್ದಾನೆ. ಸದ್ಯ ಗಾಯಗೊಂಡಿರುವ ಕಿರಿಕ್​ ಕೀರ್ತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply