DAKSHINA KANNADA
ನೆಲ್ಯಾಡಿ – ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ನಿಧನ

ಪುತ್ತೂರು, ಮಾರ್ಚ್ 13: ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗ್ರಾಮಪಂಚಾಯತ್ ಮಾಜಿ ಸದಸ್ಯೆಯೋರ್ವರು ಮೃತಪಟ್ಟ ಘಟನೆ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ, ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ.ಡಿ.ಯಾನೆ ವಲ್ಸಮ್ಮ(52) ಮೃತಪಟ್ಟ ದುರ್ದೈವಿಯಾಗಿದ್ದಾರೆ. ರೋಸಮ್ಮರವರು ಮಾರ್ಚ್ 11 ರಂದು ರಾತ್ರಿ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ಅವರಿಗೆ ವಿಷಕಾರಿ ಹಾವೊಂದು ಕಡಿದಿದೆ.

ಇದು ಗಮನಕ್ಕೆ ಬರುತ್ತಿದ್ದಂತೆ ರೋಸಮ್ಮರವರು ಅಲ್ಲಿಂದ ಪಕ್ಕದ ಮನೆಗೆ ಬಂದಿದ್ದು ಅಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ನೆಲ್ಯಾಡಿಯ ಆಸ್ಪತ್ರೆಯೊಂದಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.