LATEST NEWS
ಉಡುಪಿ – ವಿಷದ ಹಾವು ಕಚ್ಚಿ ಕೃಷಿಕ ಸಾವು
ಉಡುಪಿ, ಡಿಸೆಂಬರ್ 17: ತೋಟದಲ್ಲಿ ಕೆಲಸದ ವೇಳೆ ವಿಷದ ಹಾವೊಂದು ಕಚ್ಚಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಗುಜ್ಜರಬೆಟ್ಟು ನಿವಾಸಿ ದಿ.ಬೂಧ ಪೂಜಾರಿ ಎಂಬವರ ಪುತ್ರ, ಕೃಷಿಕ ಸುಂದರ ಪೂಜಾರಿ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ಇವರಿಗೆ ವಿಷದ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.