FILM
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಹಾವು ಕಡಿತ

ಮುಂಬಯಿ,ಡಿಸೆಂಬರ್ 26 : ರಾಯಗಢ ಜಿಲ್ಲೆಯ ಪನ್ವೇಲ್ ಬಳಿಯ ಫಾರ್ಮ್‌ಹೌಸ್‌ನಲ್ಲಿ ನಟ ಸಲ್ಮಾನ್ ಖಾನ್ ಅವರಿಗೆ ವಿಷರಹಿತ ಹಾವು ಕಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಶನಿವಾರ ರಾತ್ರಿ ಹಾವು ಸಲ್ಮಾನ್ ಅವರ ಕೈಗೆ ಕಚ್ಚಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅವರನ್ನು ನವಿ ಮುಂಬೈನ ಕಾಮೋಥೆಯಲ್ಲಿರುವ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿದ ಬಳಿಕ ಭಾನುವಾರ ಬೆಳಿಗ್ಗೆ ಡಿಸ್ಚಾರ್ಜ್ ಮಾಡಲಾಗಿದೆ.

ಸೋಮವಾರ 56 ನೇ ವಸಂತಕ್ಕೆ ಕಾಲಿಡುತ್ತಿರುವ ಸಲ್ಮಾನ್ ಖಾನ್ ಅವರ ಆರೋಗ್ಯ ಸ್ಥಿರವಾಗಿದ್ದು, ಮುಂಬೈಯ ಮನೆಗೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
Continue Reading