UDUPI
ಹಾವನ್ನು ಹೀಗೂ ಹಿಡಿಯಬಹುದೆಂದು ತೋರಿಸಿಕೊಟ್ಟ ಪೇಜಾವರಶ್ರೀಗಳು

ಉಡುಪಿ ಜುಲೈ 30: ಸ್ವಾಮಿಜಿಗಳು ಕೇವಲ ಪೂಜೆಗಳಿಗೆ ಮಾತ್ರ ಸೀಮಿತವಲ್ಲ ಎನ್ನುವುದನ್ನು ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತೋರಿಸಿಕೊಟ್ಟಿದ್ದಾರೆ. ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ತಮ್ಮ ಇತರ ಹವ್ಯಾಸಗಳಿಂದ ಗಮನ ಸೆಳೆಯುತ್ತಿದ್ದಾರೆ.
ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿಭಿನ್ನ ಅಭಿರುಚಿಯ ಸ್ವಾಮೀಜಿ. ಇತ್ತೀಚೆಗೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ನೀಲಾವರ ಗೋಶಾಲೆಯ ಆವರಣದಲ್ಲಿ ಹೆಬ್ಬಾವಿನ ಮರಿಯೊಂದು ಕಾಣಿಸಿಕೊಂಡಿದೆ. ಈ ಹಾವನ್ನು ಸರಳವಾಗಿ ಯಾವುದೇ ಅಪಾಯವಿಲ್ಲದೇ ಹಿಡಿಯುವ ವಿಧಾನ ವಿವರಿಸಿ, ಪ್ರಾತ್ಯಕ್ಷಿಕೆ ಮಾಡಿ ಪೇಜಾವರಶ್ರೀ ಎಲ್ಲರ ಹುಬ್ಬೇರಿಸಿದ್ದಾರೆ. ಪೇಜಾವರ ಶ್ರೀಗಳ ಸಾಹಸವನ್ನು ಅವರ ಶಿಷ್ಯರು ಸಹಜ ಕುತೂಹಲದಿಂದ ಕಂಡು ಅಚ್ಚರಿಪಟ್ಟಿದ್ದಾರೆ.

ತೆಂಗಿನ ಮರದ ಗರಿಯ ಕಡ್ಡಿಯಲ್ಲಿ ಹಾವು ಹಿಡಿಯುವ ಪ್ರಕ್ರಿಯೆ ಎಲ್ಲರ ಸಹಜ ಕುತೂಹಲಕ್ಕೆ ಕಾರಣವಾಗಿದೆ. ಪೇಜಾವರಶ್ರೀ ಸುಲಲಿತವಾಗಿ ಹಾವು ಹಿಡಿದು ಗೋಣಿಚೀಲಕ್ಕೆ ತುಂಬಿಸುವ ಸಂದರ್ಭ ಗೋಣಿ ಹಿಡಿದ ಶಿಷ್ಯ ಭಯದಲ್ಲಿ ಗಲಿಬಿಲಿಗೊಂಡ ಪರಿಯೂ ವಿಡಿಯೋದಲ್ಲಿ ಸೆರೆಯಾಗಿದೆ. ಹಾಗಂತ ವಿಷಕಾರಿ ಹಾವುಗಳನ್ನು ಹಿಡಿಯದಿರಿ. ತಜ್ಞರನ್ನು ಸಂಪರ್ಕ ಮಾಡಿ ಎಂದು ಪೇಜಾವರಶ್ರೀ ಹೇಳಿದ್ದಾರೆ.
https://youtu.be/sG2II-zTzOc