ಮಂಗಳೂರು, ಅಕ್ಟೋಬರ್ 06: ನಗರದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಇರುವೆ ಕಾಟದಿಂದ ಹಾವು ಒದ್ದಾಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪಟ್ಟೆ ಶೀಘ್ರಗಾಮಿ ಹಾವು ಇರುವೆ ಹಿಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಪರದಾಡಿದೆ. ಇರುವೆ ದಾಳಿಯಿಂದ ಹಾವು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ಉದ್ಯಾನವನಕ್ಕೆ ಭೇಟಿ ನೀಡಿದ ಪ್ರವಾಸಿರು ವಿಡಿಯೋ ಸೆರೆ ಹಿಡಿದಿದು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದಾರೆ.
ಇದೀಗ ವಿಡಿಯೋ ವೈರಲ್ ಆಗಿದ್ದು ಉದ್ಯಾನವನದ ಸಿಬ್ಬಂದಿಯ ನಿರ್ಲಕ್ಷ್ಯ ದ ಬಗ್ಗೆ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://youtu.be/tdfTev8mauM