Connect with us

LATEST NEWS

ದುಬೈನಲ್ಲಿ ಆರಾಮಾಗಿ ಕೆಲಸ ಮಾಡ್ಕೊಂಡಿದ್ದವರು..ಇಲ್ಲಿ ಬಂದು ಪೋಸ್ಟ್ ಹಾಕಿ ಸಿಕ್ಕಿಹಾಕಿಕೊಂಡಿದ್ದಾರೆ – ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು ಜೂನ್ 04: ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ 5 ಮಂದಿ ಯುವಕರನ್ನು ಪೊಸಲೀಸರು ಅರೆಸ್ಟ್ ಮಾಡಿದ್ದಾರೆ.


ಬಂಧಿತರ ವಿವರ

1. ಮೊಹಮ್ಮದ್ ಅಸ್ಲಾಂ , ಪ್ರಾಯ:23 ವರ್ಷ ಉಡುಪಿ ಜಿಲ್ಲೆ. ಈತ ಸೌದಿ ಅರೇಬಿಯಾದಿಂದ team_jokerzzz._ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 88/2025 ಕಲಂ.192, 353 (2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದ ಆರೋಪಿ ಮೊಹಮ್ಮದ್ ಅಸ್ಲಾಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ. ತನಿಖೆ ಮುಂದುವರಿದಿದೆ.

2. ಚೇತನ್ ಪ್ರಾಯ: 20 ಸುರತ್ಕಲ್, ಮಂಗಳೂರು, ಮತ್ತು ನಿತಿನ್ ಅಡಪ ಪ್ರಾಯ:23 ವರ್ಷ, ಹಳೆಯಂಗಡಿ ಪೋಸ್ಟ್ ಮಂಗಳೂರು ಎಂಬುವರು ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ನ್ನು ಬಳಸಿಕೊಂಡು team_karna_surathkal ಎಂಬ Instagram ಫೇಜ್ ನ್ನು ತೆರೆದಿದ್ದು, ಸದ್ರಿ ಪೇಜ್ ನಲ್ಲಿ ಚೆನ್ನಪ್ಪ @ ಮುತ್ತು ಸುರತ್ಕಲ್ ಎಂಬಾತನು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 58/2025 ಕಲಂ. 196(1), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಚೇತನ್ ಮತ್ತು ನಿತಿನ್ ಅಡಪ ಎಂಬವರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿದ್ದು, ತನಿಖೆ ಮುಂದುವರಿದಿದೆ.

3. ರಿಯಾಝ್ ಇ್ರಬಾಹಿಂ, ಪ್ರಾಯ:30 ವರ್ಷ, ಫರಂಗಿಪೇಟೆ ಮಂಗಳೂರು. ಈತಸೌದಿ ಅರೇಬಿಯಾದಿಂದ Beary_royal_nawab ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ, ಆಧಾರದಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ. 353 (2) ಭಾರತೀಯ ನ್ಯಾಯ ಸಂಹಿತೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 42/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ರಿಯಾಝ್ ಇ್ರಬಾಹಿಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ. ತನಿಖೆ ಮುಂದುವರಿದಿದೆ.
4. ಜಮಾಲ್ ಝಾಕೀರ್, ಪ್ರಾಯ:21 ವರ್ಷ ಕಸಬಾ ಬೆಂಗ್ರೆ, ಮಂಗಳೂರು ನಗರ ಎಂಬಾತನು Troll_bengare_ro_makka ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಜಮಾಲ್ ಝಾಕೀರ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.

5. ಗುರು ಪ್ರಸಾದ್, ಹಳೆಯಂಗಡಿ, ಮಂಗಳೂರು ನಗರ ಎಂಬಾತನು Guru dprasad Haleyangadi ಎಂಬ Facebook ಖಾತೆಯ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 53/2025 ಕಲಂ.196(1),(A),353(2),79,56 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ, ಸದ್ರಿ ಗುರು ಪ್ರಸಾದ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ತನಿಖೆ ಮುಂದುವರಿದಿದೆ.

 


ಈ ಪ್ರಕರಣಗಳ ಕುರಿತಂತೆ ಮಾತನಾಡಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕಳೆದ 2 ತಿಂಗಳಿನಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಹಾಕುತ್ತಿದ್ದರು, ಈಗಾಗಲೇ ನಾವು ರಿಕ್ವೆಸ್ಟ್ ಮಾಡಿದರೂ ಮತ್ತೆ ಮತ್ತೆ ಪೋಸ್ಟ್ ಮಾಡುತ್ತಿದ್ದು, ಈ ಹಿನ್ನಲೆ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲು ಟೀಂ ರೆಡಿ ಮಾಡಲಾಗಿದ್ದು, ಅವರು ನಾಲ್ಕು ದಿನ ಕೆಲಸ ಮಾಡಿ 5 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನೂ ಕೆಲವರನ್ನು ಅರೆಸ್ಟ್ ಮಾಡ್ಲಿಕ್ಕೆ ಇದೆ ಎಂದರು.

ಯಾವುದೇ ಕಾರಣಕ್ಕೂ ಬೇರೆಯವರಿಗೆ ಧಕ್ಕೆಯಾಗುವಂತ ಪೋಸ್ಟ್ ಹಾಕ್ಬೇಡಿ..ಸಮಾಜದಲ್ಲಿ ಶಾಂತಿ ಹಾಳಾಗುವಂತ ಪೋಸ್ಟ್ ಮಾಡಿದರೆ ಕಾನೂನು ಕ್ರಮಕೈಗೊಳ್ಳುತ್ತೇವೆ. ಇದೀಗ ಅರೆಸ್ಟ್ ಆದವರಲ್ಲಿ ದುಬೈನಲ್ಲಿ ಕೆಲಸ ಮಾಡಿಕೊಂಡವರು ಅರೆಸ್ಟ್ ಆಗಿದ್ದಾರೆ. ನೀವು ಎಲ್ಲಿದ್ಗರೂ ಪೊಲೀಸರು ನಿಮ್ಮನ್ನ ಬೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *