LATEST NEWS
ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ – ಶಾಸಕ ಹರೀಶ್ ಪೂಂಜಾ ವಿರುದ್ದ ದೂರು

ಮಂಗಳೂರು ಮೇ 06: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಶಾಸಕ ಹರೀಶ್ ಪೂಂಜ, ಬಿಜೆಪಿ ಕಾರ್ಯಕರ್ತ ವಿಕಾಸ್ ಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಜಿಲ್ಲಾ ಸಮಿತಿ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರಿಗೆ ಸೋಮವಾರ ದೂರು ಸಲ್ಲಿಸಿದೆ. ಜಿಲ್ಲಾ ಸಮಿತಿ ಅಧ್ಯಕ್ಷರ ಪರವಾಗಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ದೂರು ನೀಡಿದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹರೀಶ್ ಪೂಂಜ, ವಿಕಾಸ್ ಪಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ, ಸಮಾಜದಲ್ಲಿ ಶಾಂತಿಭಂಗ ಉಂಟು ಮಾಡುವ ಉದ್ದೇಶ ಹೊಂದಿದ್ದಾರೆ. ಕೋಮು ಗಲಭೆಗೆ ಪ್ರಚೋದನೆಗೆ ನೀಡಿದ್ದಾರೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಇಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ದೂರಿನಲ್ಲಿ ತಿಳಿಸಿದ್ದಾರೆ.
