FILM
ಸೋಶಿಯಲ್ ಮಿಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ
ಬೆಂಗಳೂರು ಮಾರ್ಚ್ 22: 8 ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡು ಯುಟ್ಯೂಬ್ ಕಂಟೆಂಟ್ ಮಾಡುತ್ತಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಅವರನ್ನು ನಾಲ್ಕು ದಿನಗಳ ಕಾಲ ಬೆಂಗಳೂರಿನ ಸಿಜೆಎಂ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ.
ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಜಂಟಿ ಕಾರ್ಯಚರಣೆ ವೇಳೆ ಬಂಧನವಾಗಿತ್ತು.
ಮಗು ಪೋಷಕರನ್ನು ರಾಯಚೂರಿಗೆ ಕರ್ಕೊಂಡು ಹೋಗಿ ಮಹಜರು ಮತ್ತು ಹೇಳಿಕೆ ಪಡೆಯಬೇಕಿದೆ. ಅಪಾರ್ಟ್ ಮೆಂಟ್ ನ ಅಕ್ಕಪಕ್ಕದ ಸ್ಥಳೀಯರ ಹೇಳಿಕೆ ಪಡೆಯಬೇಕಿದೆ. ಈ ಉದ್ದೇಶ ದಿಂದ ನಾಲ್ಕು ದಿನಗಳ ಕಾಲ ಕಸ್ಟಡಿ ಗೆ ಕೇಳಿದ್ದರು ಬ್ಯಾಡರಹಳ್ಳಿ ಪೊಲೀಸರು. ಸದ್ಯ ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಸೋನುವನ್ನು ಪೊಲೀಸರು ಕಳುಹಿಸಲಿದ್ದಾರೆ. ದತ್ತು ಪಡೆಯುವ ಯಾವುದೇ ನಿಯಮವನ್ನು ದತ್ತು ಪಾಲಿಸದೇ ಇರುವ ಕಾರಣಕ್ಕಾಗಿ ಮಕ್ಕಳ ಹಕ್ಕು ಕಸಿದಿರುವ ಆರೋಪ ಸೋನು ಮೇಲಿದೆ. ಉತ್ತರ ಕರ್ನಾಟಕದ 8 ವರ್ಷದ ಮಗು ಅದಾಗಿದ್ದು, ಸಿಂಪತಿ ಗಿಟ್ಟಿಸಿಕೊಂಡು ಸೆಲೆಬ್ರಿಟಿ ಆಗಲು ಸೋನು ಮುಂದಾಗಿದ್ದರು ಎನ್ನುವ ಆರೋಪ ಕೂಡ ಇದೆ.