ಸಾಮಾಜಿಕ ಜಾಲತಾಣದಲ್ಲಿರುವ ಹೇಳಿಕೆಗೂ ನನಗೂ ಯಾವುದೇ ಸಂಬಂಧ ಇಲ್ಲ -ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು ಎಪ್ರಿಲ್ 1: ಬಂಟರ ಯಾನೆ ನಾಡವರ ಮಾತೃ ಸಂಘ ಹಾಗೂ ಅದರ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ರಾಜಕೀಯ ಪ್ರೇರಿತವಾಗಿ ವ್ಯವಸ್ಥಿತವಾಗಿ ಅಪಪ್ರಚಾರ ಮಾಡಲಾಗುತ್ತಿದೆ.

ಮಾಧ್ಯಮಗಳಲ್ಲಿ ಬರುವ ಹೇಳಿಕೆಗಳಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಯಾವುದೇ ಪಕ್ಷವನ್ನು ಬೆಂಬಲಿಸಿ ಹೇಳಿಕೆಯನ್ನು ಕೊಟ್ಟಿಲ್ಲ ಎಂದು ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.

ಈ ರೀತಿಯ ಅಪಪ್ರಚಾರದ ಬಗ್ಗೆ ಚುನಾವಣಾ ಆಯೋಗ ಮತ್ತು ಪೊಲೀಸರಿಗೆ ದೂರು ನೀಡಿದ್ದೇನೆ. ಇಂತಹ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬಾರದು ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ ಹೇಳಿದ್ದಾರೆ.

ಬಂಟರ ಮಾತ್ಯ ಸಂಘವು ಶತಮಾನ ಇತಿಹಾಸವನ್ನು ಹೊಂದಿದೆ. ಇದರಲ್ಲಿ ಎಲ್ಲಾ ಪಕ್ಷಕ್ಕೆ ಸೇರಿದ ಸದಸ್ಯರು ಇದ್ದಾರೆ. ಈ ಹಿನ್ನೆಲೆಯಿಂದ ಸಂಘವು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಸಂಘ ತಟಸ್ಥ ದೋರಣೆಯಲ್ಲಿ ಕಾರ್ಯನಿರ್ವಹಿಸುತ್ತದೆ.

ಈ ಹಿಂದೆ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲೂ ಇದೇ ರೀತಿ ರಾಜಕೀಯ ಲಾಭಕ್ಕಾಗಿ ನನ್ನ ಹೆಸರು ಬಳಸಿಕೊಂಡು ನಾನು ಒಂದು ಪಕ್ಷಕ್ಕೆ ಬೆಂಬಲಿಸಿದ್ದೇನೆ ಎಂಬ ರೀತಿಯಲ್ಲಿ ಅಪಪ್ರಚಾರ ಮಾಡಿದ ಉದಾಹರಣೆ ಇದೆ. ಹಾಗೆಯೇ ಲೋಕಸಭಾ ಚುನಾವಣೆಯಲ್ಲೂ ಇದೇ ರೀತಿಯ ಅಪಪ್ರಚಾರ ನಡೆಸಲಾಗುತ್ತಿದೆ. ಈ ರೀತಿ ಕೆಲವು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಹೇಳಿಕೆಗಳಿಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಅಜಿತ್ ಕುಮಾರ್ ರೈ ಮಾಲಾಡಿ ಸ್ಪಷ್ಟಪಡಿಸಿದ್ದಾರೆ.

VIDEO