Connect with us

    DAKSHINA KANNADA

    ಅಕ್ಟೋಬರ್ 25 ರಂದು ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ…!!

    ಪುತ್ತೂರು ಅಕ್ಟೋಬರ್ 19: ಅಕ್ಟೋಬರ್ 25 ರಂದು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.


    ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅನ್ನಪ್ರಸಾದವು ಮಧ್ಯಾಹ್ನ 2.30 ಕ್ಕೆ ಕೊನೆಗೊಂಡು ರಾತ್ರಿ 7.30 ರ ಬಳಿಕವೆ ನಡೆಯಲಿದೆ. ಅಕ್ಟೋಬರ್ 25 ರಂದು ಸಂಜೆ 5.11ಕ್ಕೆ ಗ್ರಹಣ ಸ್ವರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. ಅಕ್ಟೋಬರ್ 26 ರಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

     

    ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply