Connect with us

BELTHANGADI

ಉತ್ತರ ಪ್ರದೇಶದಲ್ಲಿ ಕ್ವಾರಂಟೈನ್ ನಲ್ಲಿದ್ದ ಬೆಳ್ತಂಗಡಿ ಯೋಧ ಸಾವು

ಮಥುರಾದ ಕ್ವಾರೆಂಟೈನ್ ಕೇಂದ್ರದಲ್ಲಿದ್ದ ಜಿಲ್ಲೆಯ ಬೆಳ್ತಂಗಡಿಯ ಯೋಧ

ಮಥುರಾ ಜೂನ್ 13: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ ಮೂಲದ ಸೈನಿಕರೊಬ್ಬರೂ ಸಹ ಹೃದಯಾಘಾತದಿಂದ ಕ್ವಾರಂಟೈನ್ ಕೇಂದ್ರದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಯೋಧರನ್ನು 34 ವರ್ಷದ ಸಂದೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ.


ಸಂದೇಶ್ ರಜೆ ಪಡೆದು ಸ್ವಗ್ರಾಮಕ್ಕೆ ಬಂದಿದ್ದರು. ಕೊರೊನಾ ಲಾಕ್‍ಡೌನ್‍ನಿಂದಾಗಿ ವಾಪಸ್ ಹೋಗಲು ಸಾಧ್ಯವಿರಲಿಲ್ಲ. ಸದ್ಯ ಲಾಕ್‍ಡೌನ್ ಸಡಿಲೆಕೆ ಹಿನ್ನೆಲೆಯಲ್ಲಿ ಅವರು ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದರು.
ಕೋವಿಡ್-19 ನಿಯಮದ ಪ್ರಕಾರ ಬೇರೆ ರಾಜ್ಯ, ಪ್ರದೇಶದಿಂದ ಬಂದವರು 14 ದಿನಗಳ ಕಾಲ ಕ್ವಾರಂಟೈನ್ ಕೇಂದ್ರದಲ್ಲಿ ಇರಬೇಕು. ಅದರಂತೆ ಸಂದೇಶ್ ಅವರು ಕೂಡ ಮಥುರಾದ ಕ್ವಾರಂಟೈನ್ ಕೇಂದ್ರದಲ್ಲಿ ಉಳಿದಿದ್ದರು. ಆದರೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸಂದೇಶ್ ಶೆಟ್ಟಿ ಅವರು ಭಾರತೀಯ ಸೇನೆಯಲ್ಲಿ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಅವರ ಸಾವಿನ ಸುದ್ದಿ ಕೇಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Facebook Comments

comments