KARNATAKA
ಸಮಸ್ಯೆ ಹೇಳಲು ಬಂದ ಮಹಿಳೆ ಕೆನ್ನೆಗೆ ಭಾರಿಸಿದ ಸಚಿವ ವಿ.ಸೋಮಣ್ಣ

ಗುಂಡ್ಲುಪೇಟೆ ಅಕ್ಟೋಬರ್ 23: ಸಮಸ್ಯೆ ಹೇಳಲು ಸಚಿವ ಸೋಮಣ್ಣ ಅವರ ಹತ್ತಿರ ಬಂದ ಮಹಿಳೆಯೊಬ್ಬರಿಗೆ ಸಚಿವರು ಕೆನ್ನೆಗೆ ಭಾರಿಸಿದ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳದಲ್ಲಿ ಶನಿವಾರ ಸಂಜೆ ನಡೆದ ಗ್ರಾಮೀಣ ಪ್ರದೇಶಗಳ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಸತಿ ಮೂಲಸೌಕರ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಹೊಡೆದಿದ್ದಾರೆ. ಈ ವಿಡಿಯೊ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಂಗಳ ಗ್ರಾಮ ಪಂಚಾಯತಿಯಿಂದ 173 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರಗಳನ್ನು ಹಂಚಿಕೆ ಮಾಡಲಾಗಿತ್ತು.

‘ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ’ ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ.
ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಹೊಡೆದ ಸಚಿವ ಸೋಮಣ್ಣ!
ವರದಿ: https://t.co/ksHMnmWpJ4#VSomanna #BJPLeader pic.twitter.com/XTXbFtWjat— Prajavani (@prajavani) October 23, 2022