LATEST NEWS
ಸೋಮೇಶ್ವರ ಕಡಲ ಕಿನಾರೆಯನ್ನು ಡೇಂಜರ್ ಝೋನ್ ಎಂದು ಘೋಷಿಸಿದ ಜಿಲ್ಲಾಡಳಿತ
ಸೋಮೇಶ್ವರ ಕಡಲ ಕಿನಾರೆಯನ್ನು ಡೇಂಜರ್ ಝೋನ್ ಎಂದು ಘೋಷಿಸಿದ ಜಿಲ್ಲಾಡಳಿತ
ಮಂಗಳೂರು ಜುಲೈ 14 : ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತೆ ಕಡಲಕೊರೆತ ಸಮಸ್ಯೆಯನ್ನು ತಂದೊಡ್ಡಿದೆ.
ಮಂಗಳೂರು ಸುತ್ತಮತ್ತ ದ ಕಡಲ ತಡಿಯ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಹಾಗು ಬ್ರೇಕ್ ವಾಟರ್ ನಿಂದಾಗಿ ಕಳೆದ 2 ವರ್ಷಗಳಿಂದ ಕಡಲ ಕೊರೆತದ ಭೀತಿ ತಗ್ಗಿತ್ತು . ಅದರೆ ಈ ಬಾರಿ ಮಳೆಯ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದಲ್ಲಿ ಮತ್ತೆ ಕಡಲ ಕೊರೆತ ಆರಂಭವಾಗಿದೆ.
ಮಂಗಳೂರು ಹೊರವಲಯದ ಸೋಮೇಶ್ವರದಲ್ಲಿ ಕಡಲಕೊರೆತ ತೀವ್ರಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮೇಶ್ವರ ಕಡಲ ಕಿನಾರೆಯನ್ನು ಜಿಲ್ಲಾಡಳಿತ ಡೇಂಜರ್ ಝೋನ್ ಎಂದು ಘೋಷಿಸಿದೆ.
ಉಳ್ಳಾಲದ ಕೈಕೊ,ಸುಭಾಷ್ ನಗರ ಸೇರಿದಂತೆ ಉಚ್ಚಿಲ ಪ್ರದೇಶದಲ್ಲಿ ಆಳೆತ್ತರದ ಕಲೆಗಳು ಏಳುತ್ತಿದ್ದು ಕಡಲ ರೌದ್ರ ನರ್ತನ ಆರಂಭವಾಗಿದೆ. ಸಮುದ್ರ ತೀರದ ಹಲವಾರು ಮರಗಳು ಸಮುದ್ರ ಪಾಲಾಗಿವೆ. ಕಲಡ ತೀರದಲ್ಲಿ ವಾಸಿಸುವ ನೂರಾರು ಕುಟುಂಬಗಳು ಆತಂಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಪ್ರದೇಶದಲ್ಲಿ ಮರಳು ಕರಗಿ ಸಮುದ್ರ ಪಾಲಾಗುತಿದ್ದು ಭೂ ಪ್ರದೇಶ ಸಮುದ್ರದ ಒಡಲು ಸೇರುತ್ತಿದೆ. ಈ ಪ್ರದೇಶದಲ್ಲಿ ಸುಮಾರು 10 ಕ್ಕೂ ಹೆಚ್ಚು ಮನೆಗಳು ಅಪಾಯದ ಅಂಚಿನಲ್ಲಿವೆ. ಸಂಜೆ ಆಗುತ್ತಿದ್ದಂತೆ ಭಾರೀ ಅಲೆ ಬರುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಕಳೆದೊಂದು ವಾರದಿಂದ ಸೋಮೇಶ್ವರ – ಉಚ್ಚಿಲದಲ್ಲಿ ಭಾರೀ ಕಡಲ್ಕೊರೆತ ಆರಂಭವಾಗಿದ್ದು ಈ ಕುರಿತು ಜಿಲ್ಲಾಡಳಿತ ಸೇರಿದಂತೆ ಸ್ಥಳಿಯಾಡಳಿತಕ್ಕೆ ಮಾಹಿತಿ ನೀಡಿದ್ದರು ಈ ವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.