Connect with us

    FILM

    ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾದ ಸೋನಲ್ ಮತ್ತು ತರುಣ್

    ಮಂಗಳೂರು ಸೆಪ್ಟೆಂಬರ್ 02: ಇತ್ತೀಚೆಗಷ್ಟೇ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂಥೆರೋ ಇದೀಗ ಮಂಗಳೂರಿನಲ್ಲಿ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.


    ಸೊನಲ್ ಮೊಂಥೆರೋ ಮಂಗಳೂರಿನವರಾಗದ್ದು, ಅವರ ಕುಟುಂಬಸ್ಥರು ಮಂಗಳೂರಿನಲ್ಲೇ ಇದ್ದಾರೆ. ಹೀಗಾಗಿ ಅವರು ಆಗಸ್ಟ್​ 11ರಂದು ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಈ ನವ ಜೋಡಿ ಸಪ್ತಪದಿ ತುಳಿದಿತ್ತು. ಬಳಿಕ ಮಂಗಳೂರಿನಲ್ಲಿ ಸಂಪೂರ್ಣವಾಗಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.
    ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್‌ ಮಂಗಳೂರಿನ ಚರ್ಚ್ ಒಂದರಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಸೋನಲ್‌ ಅವರು ಬಿಳಿ ಬಣ್ಣದ ಲಾಂಗ್​ ಗೌನ್​ನಲ್ಲಿ ಮಿಂಚಿದ್ದರೆ, ತರುಣ್ ಸುಧೀರ್ ವೈಟ್​ ಸೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.


    ಚರ್ಚ್​ ವೆಡ್ಡಿಂಗ್ ಬಳಿಕ ಸ್ಟಾರ್​ ಜೋಡಿ ಮಂಗಳೂರಿನಲ್ಲಿ ಅದ್ಧೂರಿ ರೆಸೆಪ್ಷನ್‌ ಸಹ ಮಾಡಿಕೊಂಡಿದೆ. ಈ ಅದ್ಧೂರಿ ರೆಸೆಪ್ಷನ್​ನ​ಲ್ಲಿಯೂ ತರುಣ್ ಸುಧೀರ್ ಬ್ರೌನ್ ಸೂಟ್ ಹಾಗೂ ನಟಿ ಸೋನಲ್‌ ಸೀರೆಯಲ್ಲಿ ಮಿಂಚಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply