FILM
ಅಕ್ರಮ ದತ್ತು ಪ್ರಕರಣ – ರೀಲ್ಸ್ ರಾಣಿ ಸೋನು ಗೌಡಗೆ ಜಾಮೀನು

ಬೆಂಗಳೂರು ಎಪ್ರಿಲ್ 4: ಕಾನೂನು ಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪದ ಮೇಲೆ ಅರೆಸ್ಟ್ ಆಗಿ ಜೈಲಿನಲ್ಲಿರುವ ಸೋಶಿಯಲ್ ಮಿಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ಅವರಿಗೆ ಬೆಂಗಳೂರಿನ ನ್ಯಾಯಾಲಯಜಾಮೀನು ಮಂಜೂರು ಮಾಡಿದೆ.
8 ವರ್ಷದ ಹೆಣ್ಣು ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಮಾರ್ಚ್ 22 ರಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಸೋನು ಗೌಡರನ್ನು ವಶಕ್ಕೆ ಪಡೆದಿದ್ದರು.

ಜಾಮೀನು ಕೋರಿ ಸೋನು ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸೋನು ಗೌಡ ಅವರು ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.