FILM
ಮಾಲ್ಡೀವ್ಸ್ ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಂಡ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ…!!

ಮಾಲ್ಡೀವ್ಸ್ ಸೆಪ್ಟೆಂಬರ್ 03: ಮಾಲ್ಡೀವ್ಸ್ ಪ್ರವಾಸದಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಇದೀಗ ತಮ್ಮ ಹಾಟ್ ಹಾಟ್ ಪೋಟೋಗಳಿಂದ ಟ್ರೆಂಡ್ ಸೃಷ್ಠಿಸುತ್ತಿದ್ದಾರೆ.
ಮಾಲ್ಡೀವ್ಸ್ ನಲ್ಲಿ ತೆಗೆದ ಹಾಟ್ ಪೋಟೋ ಹಂಚಿಕೊಂಡಿದ್ದ ಸೋನು ಗೌಡ ಇದೀಗ ಬಿಕಿನಿಯಲ್ಲಿ ತೆಗೆದ ಪೋಟೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಸಖತ್ ವೈರಲ್ ಆಗಿದೆ.

ಕಪ್ಪು ಬಣ್ಣದ ಬಿಕಿನಿ ಧರಿಸಿ ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ವಿವಿಧ ಭಂಗಿಗಳ ಫೋಟೋಗಳನ್ನ ನಟಿ ಶೇರ್ ಮಾಡಿದ್ದಾರೆ. ಸೋನು ಅವತಾರಕ್ಕೆ ಒಂದಿಷ್ಟು ಜನ ಮೆಚ್ಚುಗೆ ಸೂಚಿಸಿದ್ರೆ, ಮತ್ತೊಂದಿಷ್ಟು ಜನ ಖಡಕ್ ಆಗಿ ಕ್ಲಾಸ್ ತೆಗೆದುಕೊಳ್ತಿದ್ದಾರೆ.
ಈ ಹಿಂದೆ ಇವರ ಕೆಲ ಖಾಸಗಿ ಫೋಟೋ- ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಹಸಿಬಿಸಿ ದೃಶ್ಯಗಳನ್ನು ನೋಡಿ ಪಡ್ಡೆ ಹುಡುಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು.
ಇದೀಗ ಮಾಲ್ಡೀವ್ಸ್ ನಲ್ಲಿರುವ ಅವರು ದಿನ ದಿನ ಹಾಟ್ ಪೋಟೋಗಳ ಮೂಲಕ ಟ್ರೋಲ್ ಮಾಡುವವರಿಗೆ ಚಮಕ್ ಕೊಡುತ್ತಿದ್ದಾರೆ.