FILM
ಲೈವ್ ಶೋ ವೇಳೆ ತೀವ್ರ ಬೆನ್ನು ನೋವು ಸೋನು ನಿಗಮ್ ಆಸ್ಪತ್ರೆಗೆ ದಾಖಲು
ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಡುವ ವೇಳೆ ಕಾಣಿಸಿಕೊಂಡು ತೀವ್ರ ಬೆನ್ನು ನೋವಿನಿಂದಾಗಿ ಖ್ಯಾತ ಸಿಂಗರ್ ಸೋನು ನಿಗಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲೈವ್ ಶೋ ನಡೆಯುತ್ತಿರುವ ವೇಳೆಯೇ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಆದರೂ ನೋವನ್ನು ಲೆಕ್ಕಿಸದೇ ಶೋ ಮುಗಿಸಿದ್ದರು, ಆದರೆ ನೋವು ಹೆಚ್ಚಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆ ಬಳಿಕ ಏನಾಯಿತು ಎಂಬುದನ್ನು ಅವರು ವಿಡಿಯೋ ಮೂಲಕ ವಿವರಿಸಿದ್ದಾರೆ. ಸೋನು ನಿಗಮ್ ಅವರು ಆಸ್ಪತ್ರೆಯಲ್ಲಿ ಮಲಗಿದ್ದು, ಏನಾಯಿತು ಎಂಬುದನ್ನು ವಿವರಿಸಿದ್ದಾರೆ. ‘ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನೋವು ಕಾಣಿಸಿಕೊಂಡಿತು. ಆದರೆ, ಹೇಗೋ ಮ್ಯಾನೇಜ್ ಮಾಡಿದೆ. ಜನರು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ’ ಎಂದು ಅವರು ಹೇಳಿದ್ದಾರೆ. ‘ಅತಿಯಾದ ನೋವು ಕಾಣಿಸಿತ್ತು.
ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಕಿತ್ತು ಬರುತ್ತಿತ್ತು’ ಎಂದು ಅವರು ಹೇಳಿರೋ ಅವರು ವಿಡಿಯೋ ಕ್ಯಾಪ್ಶನ್ನಲ್ಲಿ ‘ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು’ ಎಂದಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಸರಸ್ವತಿ ತಮ್ಮ ನೆಚ್ಚಿನ ಮಗುವ ಕೈ ಹಿಡಿಯಲೇಬೇಕಲ್ಲ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಬೇಗ ಚೇತರಿಸಿಕೊಳ್ಳಿ ಎಂದು ಕಮೆಂಟ್ ಮಾಡಿದ್ದಾರೆ. ನಿಮ್ಮ ನೋವನ್ನು ನೋಡಲು ಸಾಧ್ಯವಾಗುತ್ತಿಲ್ಲ ಎಂದು ಕೆಲವರು ಹೇಳಿದ್ದಾರೆ.