BANTWAL
ಜನಾರ್ಧನ ಪೂಜಾರಿ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ
ಜನಾರ್ಧನ ಪೂಜಾರಿ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ
ಬಂಟ್ವಾಳ ಎಪ್ರಿಲ್ 19: ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿ ಬರುತ್ತಿದ್ದಂತೆ ಕಾಂಗ್ರೇಸ್ ನ ಮುಖಂಡರು ಹಿರಿಯ ಕಾಂಗ್ರೇಸ್ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ಆಶೀರ್ವಾದ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. ಈ ಸಾಲಿಗೆ ಈಗ ಉಡುಪಿ ಕಾಪು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಸೇರಿದ್ದಾರೆ.
ಇತ್ತೀಚೆಗೆ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ ರಮಾನಾಥ ರೈ ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದರು.
ಇಂದು ಕಾಪು ಕ್ಷೇತ್ರದ ಅಭ್ಯರ್ಥಿಯಾಗಿರುವ ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಸುವ ಮೊದಲು ಪೂಜಾರಿ ಕಾಲಿಗೆರಗಿ ಆಶೀರ್ವಾದ ಪಡೆದರು. ಬಂಟ್ವಾಳದಲ್ಲಿರುವ ಪೂಜಾರಿ ಮನೆಗೆ ಭೇಟಿ ನೀಡಿ ಪೂಜಾರಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಯಶಾಲಿಯಾಗುವಂತೆ ಜನಾರ್ಧನ ಪೂಜಾರಿ ಹರಿಸಿದ್ದಾರೆ.
You must be logged in to post a comment Login