Connect with us

    KARNATAKA

    ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ – ಸೌಜನ್ಯ ತಂದೆಯಿಂದ ಹೈಕೋರ್ಟ್ ಗೆ ಮೇಲ್ಮನವಿ

    ಬೆಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸೌಜನ್ಯ ತಂದೆ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಇದೀಗ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಕೇಂದ್ರೀಯ ತನಿಖಾ ದಳಕ್ಕೆ ನೋಟಿಸ್‌ ಜಾರಿ ಮಾಡಿದೆ.


    ಮೃತ ಯುವತಿ ಸೌರ್ಜನ್ಯ ಅವರ ತಂದೆ ಚಂದಪ್ಪ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಪ್ರಕರಣದಿಂದ ಆರೋಪಿ ಸಂತೋಷ್‌ ರಾವ್‌ ಅನ್ನು ಖುಲಾಸೆಗೊಳಿಸಿ ವಿಚಾರಣಾಧೀನ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯು ಇದೇ ನ್ಯಾಯಾಲಯದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿರುವ ಪೀಠವು ರೋಸ್ಟರ್‌ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದೆ.


    ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಪ್ರತಿವಾದಿಗಳಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಡಗಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ಪೀಠವು ನೋಟಿಸ್‌ ಜಾರಿಗೊಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply