ಬೆಳ್ತಂಗಡಿ ಸೆಪ್ಟೆಂಬರ್ 03: ಧರ್ಮಸ್ಥಳ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಸೌಜನ್ಯ ಪ್ರಕರಣವನ್ನು ಎಸ್ಐಟಿ ಮತ್ತೆ ತನಿಖೆ ಮಾಡುತ್ತಾ ಎನ್ನುವ ಪ್ರಶ್ನೆ ಮೂಡಿದ್ದುಸ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್ ಪಡೆದವರಿಗೆ ವಿಶೇಷ ತನಿಖಾ ತಂಡ ವಿಚಾರಣೆಗ ಹಾಜರಾಗಲು ಸೂಚನೆ ನೀಡಿದೆ.

ಸೌಜನ್ಯ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ಬುಲಾವ್ ನೀಡಿದೆ. ಹೀಗಾಗಿ ಆರೋಪ ಹೊತ್ತ ಉದಯ್ ಕುಮಾರ್ ಜೈನ್ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಸೌಜನ್ಯ ತಾಯಿ ಎಸ್‌ಐಟಿಗೆ ಕೊಟ್ಟ ದೂರಿನ ಮೇರೆಗೆ ಅಥವಾ ಚಿನ್ನಯ್ಯ ನೀಡಿದ ಕೇಳಿಕೆಯ ಕಾರಣದಿಂದಲೂ ನನ್ನನ್ನ ಎಸ್‌ಐಟಿ ಕರೆದಿರಬಹುದು. ಯಾವುದೇ ತನಿಖೆಗೂ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಬುರುಡೆ ಪ್ರಕರಣ ಮುಚ್ಚಿ ಹಾಕಲು ಈ ಪ್ರಕರಣವನ್ನ ಮತ್ತೆ ಮುನ್ನಲೆಗೆ ತರುತ್ತಿದ್ದಾರೆ. ಸಿಐಡಿ, ಸಿಬಿಐ ನನ್ನನೂ ತನಿಖೆ ನಡೆಸಿದ್ದಾರೆ. ಬ್ರೈನ್ ಮ್ಯಾಪಿಂಗ್ ಕೂಡ ಮಾಡಿದ್ದಾರೆ, ಇವತ್ತು ಮತ್ತೆ ಎಸ್‌ಐಟಿ ಕರೆದಿದ್ದಾರೆ. ನಾವು ಯಾವುದೇ ವಿಚಾರಣೆಗೂ ಸಿದ್ಧ ಎಂದು ಉದಯ್ ಕುಮಾರ್ ಜೈನ್ ಹೇಳಿದ್ದಾರೆ. ಸೌಜನ್ಯ ಸತ್ತು ಒಂದು ವರ್ಷದ ನಂತರ ನಮ್ಮ ಹೆಸರು ಸೇರಿಸುವ ಕುತಂತ್ರ ನಡೆಯಿತು. ಆದ್ರೆ ಲೋಕಲ್ ಪೊಲೀಸ್ ತನಿಖೆ ವೇಳೆ ಎಫ್‌ಐಆರ್‌ನಲ್ಲಿ ನನ್ನ ಹೆಸರೇ ಇರಲಿಲ್ಲ. ಗೌರ್ಮೆಂಟ್ ವಕೀಲನನ್ನ ಕ್ಯಾಚ್ ಮಾಡಿ ಕುತಂತ್ರ ನಡೆಸಿದ್ರು. ಈಗ ನಮ್ಮನ್ನೆಲ್ಲಾ ದಿಕ್ಕಾಪಾಲು ಮಾಡಿ ಸೌಜ್ಯ ತಾಯಿ ದೊಡ್ಡ ಮನೆಯಲ್ಲಿ ಆರಾಮಾಗಿದ್ದಾರೆ. ಅವರ ಮನೆ ಮೇಲೂ ಇಡಿ ರೇಡ್ ಆಗಬೇಕು ಅಂತ ಒತ್ತಾಯಿಸಿದ್ದಾರೆ.



