Connect with us

    BELTHANGADI

    ಸೌಜನ್ಯ ಪ್ರಕರಣ: ನ್ಯಾಯಾಲಯದ ನಿರ್ಧಾರದಂತೆ ಕ್ರಮ- ಡಾ.ಜಿ.ಪರಮೇಶ್ವರ್‌..!

    ಸೌಜನ್ಯಾ ಪ್ರಕರಣವನ್ನು ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು.
    ಕೋರ್ಟ್‌ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

    ಅರಸೀಕೆರೆ : ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು.
    ಕೋರ್ಟ್‌ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.


    ಸೌಜನ್ಯಾ ಕೊಲೆ ಪ್ರಕರಣವನ್ನು ಸರಕಾರ ನೇರವಾಗಿ ಮರುತನಿಖೆ ಮಾಡುವಂತಿಲ್ಲ.

    ಆದರೆ ನ್ಯಾಯಾಲಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಿದಲ್ಲಿ ಮರು ತನಿಖೆ ಮಾಡಬಹುದು.

    ಹಾರನಹಳ್ಳಿ ಕೋಡಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಅಲ್ಲ.

    ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು.

    ನ್ಯಾಯಾಲಯ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ನ್ಯಾಯಾಲಯ ಮರು ತನಿಖೆ ಮಾಡಿ ಎಂದು ನಿರ್ದೇಶಿಸಿದರೆ ಸರಕಾರ ಮರುತನಿಖೆ ಮಾಡಬಹುದು.

    ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply