KARNATAKA
ಸೌಜನ್ಯ ಹತ್ಯೆ ಮರು ತನಿಖೆಗೆ ಪೋಷಕರು ಕೇಂದ್ರಕ್ಕೆ ಮನವಿ ಸಲ್ಲಿಸಬೇಕು – ಸಿಎಂ ಸಿದ್ದರಾಮಯ್ಯ

ಬೆಂಗಳೂರು ಅಗಸ್ಟ್ 24: ರಾಜ್ಯದಲ್ಲಿ ಸುದ್ದಿಯಲ್ಲಿರುವ ಸೌಜನ್ಯ ಪ್ರಕರಣದ ಮರು ತನಿಖೆಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಾಹಿತಿಗ ಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಈ ವೇಳೆ ಸಾಹಿತಿಗಳು ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ನಡೆಸುವಂತೆ ಆಕೆಯ ಪೋಷಕರು ಕೇಂದ್ರ ಸರ್ಕಾರವನ್ನು ಕೋರ ಬೇಕಿದೆ. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಮರುತನಿಖೆ ನಡೆಸಲು ಪತ್ರ ಬರೆಯಲಿದೆ. ಅಲ್ಲದೆ, ಪ್ರಕರಣ ಕುರಿತು, ಮರುತನಿಖೆ ನಡೆಸಲು ಕೇಂದ್ರದ ಮೇಲೆ ಒತ್ತಡ ತರುವ ಬಗ್ಗೆ ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.